Publish Date: Thu, 10 Feb 2022 (10:10 IST)
Updated Date: Thu, 10 Feb 2022 (10:18 IST)
ವಿಜಯವಾಡ: ವಿವಾಹಿತ ವ್ಯಕ್ತಿಯೊಬ್ಬ ಪಕ್ಕದ ಮನೆಯವಳನ್ನು ಎಳೆದುಕೊಂಡು ಬಂದು ಅತ್ಯಾಚಾರವೆಸಗಿದ ಘಟನೆ ನಡೆದಿದೆ.
ಇದಕ್ಕೆ ಪತ್ನಿಯೂ ಸಾಥ್ ನೀಡಿದ್ದು, ಪತಿಯ ಕೃತ್ಯವನ್ನು ಮೊಬೈಲ್ ನಲ್ಲಿ ಸೆರೆ ಹಿಡಿದಿಟ್ಟುಕೊಂಡಿದ್ದಾಳೆ. ಈ ಬಗ್ಗೆ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಾಳೆ.
ಸಂತ್ರಸ್ತೆಯ ಗಂಡ ಕೆಲಸಕ್ಕೆಂದು ಹೊರಗೆ ಹೋಗಿದ್ದಾಗ ರಾತ್ರಿ ವೇಳೆ ನೆರೆಮನೆಯಾತ ಕೃತ್ಯವೆಸಗಿದ್ದಾನೆ. ಘಟನೆ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಆರೋಪಿಯ ಪತ್ನಿ ಬೆದರಿಕೆ ಹಾಕಿದ್ದಾಳೆ ಎಂದು ತಿಳಿದುಬಂದಿದೆ. ಇದೀಗ ಆರೋಪಿ ದಂಪತಿ ವಿರುದ್ಧ ಪ್ರಕರಣ ದಾಖಲಾಗಿದೆ.