Select Your Language

Notifications

webdunia
webdunia
webdunia
webdunia

ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನೇ ಕೊಲ್ಲಲು ಸುಪಾರಿ ಕೊಟ್ಟ ಪತ್ನಿ

ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನೇ ಕೊಲ್ಲಲು ಸುಪಾರಿ ಕೊಟ್ಟ ಪತ್ನಿ
ಚೆನ್ನೈ , ಮಂಗಳವಾರ, 28 ಡಿಸೆಂಬರ್ 2021 (09:51 IST)
ಚೆನ್ನೈ: ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾದನೆಂದು ಪತ್ನಿಯೇ ಸುಪಾರಿ ಕೊಟ್ಟು ಕೊಲ್ಲಲು ಯತ್ನಿಸಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಪತ್ನಿ ತನ್ನ ಪತಿಯನ್ನು ಕೊಲ್ಲಲು ಇಬ್ಬರು ರೌಡಿಗಳಿಗೆ ಸುಪಾರಿ ಕೊಟ್ಟಿದ್ದಳು. ಮೊಬೈಲ್ ರಿಪೇರಿ ಅಂಗಡಿ ಇಟ್ಟುಕೊಂಡಿದ್ದ ಪತಿ ಮನೆಗೆ ಮರಳುವಾಗ ಇಬ್ಬರು ಅವರ ಮೇಲೆ ದಾಳಿ ನಡೆಸಿದ್ದರು. ಗಾಯಗೊಂಡಿದ್ದ ಪತಿ ರೌಡಿಗಳಿಂದ ತಪ್ಪಿಸಿಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ನಂತರ ಪೊಲೀಸರಿಗೆ ದೂರು ನೀಡಿದ್ದಾನೆ.

ತನಿಖೆ ನಡೆಸಿದಾಗ ತನ್ನ ಜೊತೆಗೆ ಮೊದಲು ಕೆಲಸ ಮಾಡುತ್ತಿದ್ದ ವ್ಯಕ್ತಿಯೊಂದಿಗೆ ಪತ್ನಿಗೆ ಅಕ್ರಮ ಸಂಬಂಧವಿತ್ತು. ಅದಕ್ಕಾಗಿಯೇ ಕೊಲೆಗೆ ಯತ್ನಿಸಲಾಗಿದೆ ಎಂದು ತಿಳಿದುಬಂದಿದೆ. ಆರೋಪಿ ಪತ್ನಿಯನ್ನು ಬಂಧಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಪ್ರಾಪ್ತೆಯ ಶೀಲಕೆಡಿಸಿ ಮೃತದೇಹವನ್ನು ಮಾಡಿನ ಮೇಲೆ ನೇತು ಹಾಕಿದರು!