Publish Date: Mon, 27 Nov 2023 (20:09 IST)
Updated Date: Mon, 27 Nov 2023 (19:13 IST)
ಕುಡಿಯಲು ಹಣ ಕೊಡಲಿಲ್ಲ ಎಂದು ಪತ್ನಿಯನ್ನು ಕ್ರೂರಿ ಪತಿಯೊಬ್ಬ ಹೊಡೆದು ಕೊಂದಿದ್ದಾನೆ. ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಚಿಕ್ಕ ಉಪ್ಪೇರಿಯಲ್ಲಿ ಘಟನೆ ನಡೆದಿದೆ. ಸುನೀತಾ ಪತಿಯಿಂದ ಹತ್ಯೆಯಾದ ಮಹಿಳೆ. ಪತ್ನಿಯ ಹತ್ಯೆಗೈದ ಆರೋಪಿ ಬಸವರಾಜ್. ಪ್ರೀತಿಸಿ ಮದುವೆಯಾಗಿದ್ದ ಇಬ್ಬರೂ, 2015ರಲ್ಲಿ ಲಿಂಗಸಗೂರು ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಸತಿಪತಿಗಳಾಗಿದ್ದರು.
ಮದುವೆಯಾಗಿ ಕೆಲ ದಿನಗಳ ಕಾಲ ಮಾತ್ರ ಸುಖ ಸಂಸಾರ ನಡೆಸಿದ್ದರು. ಬಳಿಕ ಕುಡಿತಕ್ಕೆ ದಾಸನಾಗಿದ್ದ ಪತಿ ಬಸವರಾಜ ನಿತ್ಯ ಹಣಕ್ಕಾಗಿ ಪತ್ನಿಯನ್ನು ಪೀಡಿಸುತ್ತಿದ್ದ. ನಿನ್ನೆ ಜಮೀನಿನಲ್ಲಿ ಬೆಳೆಗೆ ನೀರು ಕಟ್ಟುವಾಗ ಇಬ್ಬರ ನಡುವೆ ಗಲಾಟೆ ನಡೆದಿದ್ದು, ಆ ವೇಳೆ ಪಕ್ಕದಲ್ಲಿದ್ದ ಸಲಿಕೆ ತೆಗೆದುಕೊಂಡು ಹಲ್ಲೆ ನಡೆಸಿದ್ದಾನೆ. ಹಲ್ಲೆಯ ರಭಸಕ್ಕೆ ಸುನೀತಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಲಿಂಗಸಗೂರು ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.