ಅನೈತಿಕ ಸಂಬಂಧವನ್ನು ವಿರೋಧಿಸಿದ್ದಕ್ಕೆ ಪತಿಯನ್ನೇ ಬೆಂಕಿ ಹಚ್ಚಿ ಕೊಂದ ಪತ್ನಿ

Webdunia
ಸೋಮವಾರ, 21 ಜನವರಿ 2019 (07:12 IST)
ಗುಜರಾತ್ : ಅನೈತಿಕ ಸಂಬಂಧದ ವಿಚಾರಕ್ಕೆ ಸಂಬಂಧಿಸಿದಂತೆ ಪತಿಯ ಮೇಲೆ ಪತ್ನಿಯೇ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿರುವ  ಘಟನೆ ಗುಜರಾತ್‍ ನ ಪಂಚಮಹಲ್ ಜಿಲ್ಲೆಯಲ್ಲಿ ನಡೆದಿದೆ.


ಗುರೂಜಿ ಮಾನೋರ್ಭಾಯಿ ತದ್ವಿ ಮೃತ ಪತಿ. ಬುಧಿಬೆನ್ ಪತಿಗೆ ಬೆಂಕಿ ಹಚ್ಚಿದ ಆರೋಪಿ ಪತ್ನಿ. ಈಕೆ ಎರಡು ವರ್ಷಗಳ ಹಿಂದೆಯೇ ಪತಿಯನ್ನು ಬಿಟ್ಟು ಅನೈತಿಕ ಸಂಬಂಧ ಹೊಂದಿದ್ದ ಲವ್ವರ್ ಜೊತೆ ವಾಸಿಸುತ್ತಿದ್ದಳು. ಆದರೆ ಮೂರು ತಿಂಗಳ ಹಿಂದೆ ಮತ್ತೆ ವಾಪಸ್ ಬಂದು ಪತಿಯೊಂದಿಗೆ ವಾಸಿಸುತ್ತಿದ್ದಳು.


ಆದರೆ ಈ ಅನೈತಿಕ ಸಂಬಂಧ ವಿಚಾರದ ಬಗ್ಗೆ ಬುಧವಾರ ರಾತ್ರಿ ಪತಿ ಪತ್ನಿಯರ ನಡುವೆ ಜಗಳ ನಡೆದಿದೆ. ಜಗಳ ವಿಕೋಪಕ್ಕೆ ಹೋಗಿ ಅನೈತಿಕ ಸಂಬಂಧವನ್ನು ವಿರೋಧಿಸಿದ್ದಕ್ಕೆ ಕೋಪಗೊಂಡ ಆರೋಪಿ ಪತ್ನಿ ಅಲ್ಲೆ ಇದ್ದ ಸೀಮೆಎಣ್ಣೆ ಸುರಿದು ಪತಿಗೆ ಬೆಂಕಿ ಹಚ್ಚಿದ್ದಾಳೆ.


ಕೂಡಲೇ ಆತನನ್ನು ಗೋಧ್ರಾ ಪಟ್ಟಣದಲ್ಲಿನ ಆಸ್ಪತ್ರೆಗೆ ದಾಖಲಿಸಿದ್ದರೂ ದೇಹದ ಶೇ.80 ರಷ್ಟು ಭಾಗ ಸುಟ್ಟು ಹೋಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೇ ಆತ ಮೃತಪಟ್ಟಿದ್ದಾನೆ. ಈ ಘಟನೆಗೆ ಸಂಬಂಧಿಸಿದಂತೆ ಆರೋಪಿ ಪತ್ನಿಯ ವಿರುದ್ಧ ಐಪಿಸಿ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡ  ಪೊಲೀಸರು  ಆಕೆಯನ್ನು ಬಂಧಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments