Select Your Language

Notifications

webdunia
webdunia
webdunia
webdunia

ಹರಿಯಾಣಾ: ಬಿಜೆಪಿ ನಾಯಕರಲ್ಲಿ ಮುಖ್ಯಮಂತ್ರಿ ಹುದ್ದೆಗಾಗಿ ಕಿತ್ತಾಟ ಆರಂಭ

ಹರಿಯಾಣಾ:  ಬಿಜೆಪಿ ನಾಯಕರಲ್ಲಿ ಮುಖ್ಯಮಂತ್ರಿ ಹುದ್ದೆಗಾಗಿ ಕಿತ್ತಾಟ ಆರಂಭ
ಚಂಡೀಗಡ್ , ಭಾನುವಾರ, 19 ಅಕ್ಟೋಬರ್ 2014 (12:10 IST)
ಹರಿಯಾಣಾ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿ ಪಕ್ಷ ಮುನ್ನಡೆ ಸಾಧಿಸುತ್ತಿದ್ದಂತೆ ಬಿಜೆಪಿ ನಾಯಕರಲ್ಲಿ ಮುಖ್ಯಮಂತ್ರಿ ಸ್ಥಾನದ ಕಿತ್ತಾಟ ಆರಂಭವಾಗಿದೆ. ಅಂಬಾಲಾ ವಿಧಾನಸತ್ರೆ ಕ್ಷೇತ್ರದಿಂದ ಜಯಗಳಿಸಿದ ಬಿಜೆಪಿ ಅಭ್ಯರ್ಥಿ ಅನಿಲ್ ವಿಜ್ ನನಗೆ ಮುಖ್ಯಮಂತ್ರಿ ಸ್ಥಾನ ನೀಡಿದಲ್ಲಿ ರಾಜ್ಯವನ್ನು ಅಭಿವೃದ್ಧಿಪಡಿಸುತ್ತೇನೆ ಎಂದು ಘೋಷಿಸಿದ್ದಾರೆ.
 
ರಾಜ್ಯದಲ್ಲಿಯೇ ಮೊದಲ ಬಾರಿಗೆ ವಿಧಾನಸಭೆ ಚುನಾವಣೆಯಲ್ಲಿ ಜಯಭೇರಿ ದಾಖಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವಿಜ್, ನನಗೆ ಸಿಎಂ ಹುದ್ದೆ ನೀಡಿದಲ್ಲಿ ದಕ್ಷತೆಯಿಂದ ಕಾರ್ಯನಿರ್ವಹಿಸುತ್ತೇನೆ ಎಂದು ತಿಳಿಸಿದ್ದಾರೆ.
 
ಆದರೆ, ಮುಖ್ಯಮಂತ್ರಿ ಹುದ್ದೆ ನೀಡುವಂತೆ ಹೈಕಮಾಂಡ್‌ ಮುಂದೆ ಲಾಬಿ ನಡೆಸುವುದಿಲ್ಲ. ಮುಖ್ಯಮಂತ್ರಿ ಯಾರಾಗಬೇಕು ಎನ್ನುವುದು ಪಕ್ಷ ನಿರ್ಧರಿಸುತ್ತದೆ ಎಂದರು.
 
ನಾನು ಐದು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದಲ್ಲದೇ ಶಾಸಕಾಂಗ ಪಕ್ಷದ ನಾಯಕಾಗಿದ್ದೇನೆ. ಆದರೆ, ಸಿಎಂ ಅಭ್ಯರ್ಥಿಯ ಬಗ್ಗೆ ಪಕ್ಷ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಬಿಜೆಪಿ ಮುಖಂಡ ಅನಿಲ್ ವಿಜ್ ಹೇಳಿದ್ದಾರೆ.
 
 

Share this Story:

Follow Webdunia kannada