Webdunia - Bharat's app for daily news and videos

Install App

ಉತ್ತರಪ್ರದೇಶ ಚುನಾವಣೆ: ಪ್ರಧಾನಿ ಮೋದಿ, ಅಮಿತ್ ಶಾ ರಣತಂತ್ರ

Webdunia
ಶನಿವಾರ, 21 ಮೇ 2016 (11:24 IST)
ಆಸ್ಸಾಂ ರಾಜ್ಯದಲ್ಲಿ ಭಾರಿ ಬಹುಮತಗಳಿಸಿ ಅಧಿಕಾರದ ಗದ್ದುಗೆ ಹಿಡಿದು ಇತಿಹಾಸ ಸೃಷ್ಟಿಸಿದ ನಂತರ ಪ್ರಧಾನಿ ಮೋದಿ, ಉತ್ತರಪ್ರದೇಶ ಚುನಾವಣೆ ಸಿದ್ದತೆಗಾಗಿ ತಂಡದಲ್ಲಿ ಬದಲಾವಣೆ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಉತ್ತರಪ್ರದೇಶ ಚುನಾವಣೆ ಗಮನದಲ್ಲಿಟ್ಟುಕೊಂಡು ಸಚಿವ ಸಂಪುಟದಲ್ಲಿ ಪುನಾರಚನೆ ಮಾಡಲಿದ್ದು ಉತ್ತರಪ್ರದೇಶದ ಸಂಸದರಿಗೆ ಕೇಂದ್ರ ಸಚಿವ ಸ್ಥಾನ ದೊರೆಯಲಿದ್ದು, ಕೆಲವು ಸಚಿವರಿಗೆ ಕೊಕ್ ನೀಡಲಾಗುತ್ತಿದೆ ಎನ್ನಲಾಗಿದೆ.
 
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಬಿಜೆಪಿ ಪಕ್ಷದಲ್ಲಿ ಮತ್ತಷ್ಟು ಬದಲಾವಣೆಗಳನ್ನು ತರಲು ನಿರ್ಧರಿಸಿದ್ದು ಹೊಸ ಮುಖಗಳಿಗೆ ಮಣೆಹಾಕಲಿದ್ದಾರೆ. ನೂತನ ಉಪಾಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 
 
ವರದಿಗಳ ಪ್ರಕಾರ, ಕೇಂದ್ರ ಸಚಿವರಾದ ಜೆ.ಪಿ,ನಡ್ಡಾ, ಪ್ರಕಾಶ್ ಜಾವ್ಡೇಕರ್, ಗಿರಿರಾಜ್ ರಾಜ್ ಅವರಿಗೆ ಕೊಕ್ ನೀಡುವ ಸಾಧ್ಯತೆಗಳಿವೆ. ಮೂವರು ಸಚಿವರನ್ನು ಪಕ್ಷದ ಸಂಘಟನೆಗಾಗಿ ಬಳಸಿಕೊಳ್ಳಲಾಗುವುದು ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ.  
 
ಪ್ರಧಾನಮಂತ್ರಿ ನರೇಂದ್ರ ಮೋದಿ ಸರಕಾರ ಎರಡು ವರ್ಷಗಳ ಅವಧಿಯನ್ನು ಪೂರ್ಣಗೊಳಿಸಿದ್ದು, ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವ ಒತ್ತಡವನ್ನು ಎದುರಿಸುತ್ತಿದೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments