ಉತ್ತರ ಗೋವಾದ ಮಾಪುಸಾ ಪಟ್ಟಣದಲ್ಲಿ ನೈಜಿರಿಯಾ ದೇಶದ ನಾಗರಿಕನೊಬ್ಬ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ ಘಟನೆ ವರದಿಯಾಗಿದೆ.
ಮನೆಯಲ್ಲಿ ಏಕಾಂಗಿಯಾಗಿದ್ದ ಮಹಿಳೆಯನ್ನು ಕಂಡ ಆರೋಪಿಗಳು ಮನೆಯೊಳಗೆ ನುಗ್ಗಿ ಕೂಗಿದಲ್ಲಿ ಹತ್ಯೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾರೆ. ಆರೋಪಿಗಳ ಕೃತ್ಯದಿಂದ ಕಂಗಾಲಾದ ಮಹಿಳೆ ಮನೆಯಿಂದ ಹೊರಗೆ ಬರಲು ತುಂಬಾ ಪ್ರಯತ್ನಿಸಿದ್ದಾಳೆ. ಆದರೆ, ಸಾಧ್ಯವಾಗಿಲ್ಲ.
ಇಬ್ಬರು ಆರೋಪಿಗಳು ಆಕೆಯ ಮೇಲೆ ಗ್ಯಾಂಗ್‌ರೇಪ್ ಎಸಗಿದ್ದಲ್ಲದೇ ಯಾರಿಗಾದರೂ ತಿಳಿಸಿದಲ್ಲಿ ಹತ್ಯೆ ಮಾಡುವುದಾಗಿ ಬೆದರಿಕೆಯೊಡ್ಡಿ ಪರಾರಿಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ|
ನೈಜೇರಿಯಾ ದೇಶದ ಇಬ್ಬರು ಪ್ರಜೆಗಳು ಪಾರ್ರಾ ಗ್ರಾಮದಲ್ಲಿ 39 ವರ್ಷ ವಯಸ್ಸಿನ ಮಹಿಳೆಗೆ ಚಾಕುವಿನಿಂದ ಬೆದರಿಸಿ ಕೋಣೆಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳ ವಿರುದ್ಧ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರದ ದೂರು ದಾಖಲಾಗಿದ್ದು, ಅವರ ಪತ್ತೆಗಾಗಿ ಜಾಲ ಬೀಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ವೆಬ್‌ದುನಿಯಾ
ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.