Webdunia - Bharat's app for daily news and videos

Install App

ಚಲಿಸುತ್ತಿರುವ ಕಾರಿನಲ್ಲಿಯೇ ಯುವತಿಯ ಮೇಲೆ ಗ್ಯಾಂಗ್‌ರೇಪ್

Webdunia
ಮಂಗಳವಾರ, 5 ಮೇ 2015 (15:40 IST)
ನಗರದ ಇಂದ್ರ ಪ್ರಸ್ತ ಕಾಲೇಜಿನ ಬಳಿ ಅರೆಪ್ರಜ್ಞಾವಸ್ಥೆಯಲ್ಲಿ ರಸ್ತೆಯಲ್ಲಿ ಬಿದ್ದ 20 ವರ್ಷದ ಯುವತಿಯನ್ನು ಸಾರ್ವಜನಿಕರು ಆಕೆಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಜ್ಞೆ ಮರಳಿದ ನಂತರ ಮಾತನಾಡಿದ ಯುವತಿ ತನ್ನ ಬಾಸ್ ಮತ್ತು ಆತನ ಕೆಲ ಸ್ನೇಹಿತರು ತಂಪು ಪಾನೀಯದಲ್ಲಿ ಮತ್ತು ಬರಿಸುವ ಔಷಧಿ ನೀಡಿ ಚಲಿಸುತ್ತಿರುವ ಕಾರಿನಲ್ಲಿಯೇ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಯುವತಿಯ ದೂರು ಆಧರಿಸಿ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯ ಅಧಿಕಾರಿಗಳು ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಯುವತಿಯ ಮೇಲೆ ಅತ್ಯಾಚಾರವೆಸಗಿದ ಪ್ರಮುಖ ಆರೋಪಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದು, ತಾನು ಮುಗ್ದ, ಘಟನೆ ನಡೆದಾಗ ನಾನು ನಗರದಲ್ಲಿಯೇ ಇರಲಿಲ್ಲ ಎಂದು ಹೇಳಿಕೆ ನೀಡಿದ್ದಾನೆ.

ಆರೋಪಿ ರಾಜೇಶ್ ಸಿಂಘಾಲ್ ಹೇಳಿಕೆಗಳ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ ಎಂದು ಉತ್ತರ ವಲಯದ ಪೊಲೀಸ್ ಆಯುಕ್ತ ಮಧುರ್ ವರ್ಮಾ ಹೇಳಿದ್ದಾರೆ.

ಕಳೆದ ಎರಡು ವರ್ಷಗಳಿಂದ ಆರೋಪಿ ರಾಜೇಶ್ ಸಿಂಘಾಲ್ ಪರಿಚಿತನಾಗಿದ್ದು, ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಿದ್ದ. ಆತನ ಕರೆಯ ಮೇರೆಗೆ ನಾನು ತೆರಳಿದ್ದೆ. ಆದರೆ, ಸಿಂಘಾಲ್ ಮತ್ತು ಆತನ ಗೆಳೆಯರು ನನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಯುವತಿ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments