Webdunia - Bharat's app for daily news and videos

Install App

ಹಸುಗೂಸನ್ನು ಕೊಂದು ಬೆಕ್ಕು ಹೊತ್ತಿಕೊಂಡು ಹೋದ ಕಥೆ ಕಟ್ಟಿದ ತಾಯಿ

Webdunia
ಶನಿವಾರ, 30 ಜುಲೈ 2016 (11:00 IST)
ಮೂರನೆಯ ಬಾರಿಗೂ ಹೆಣ್ಣು ಮಗು ಹುಟ್ಟಿತೆಂಬ ಬೇಸರದಲ್ಲಿ  ಪಾಪಿ ತಾಯಿಯೋರ್ವಳು 26 ದಿನದ ಮಗುವನ್ನು ನೀರಿನಲ್ಲಿ ಮುಳುಗಿಸಿ ಕೊಂದ ಹೇಯ ಘಟನೆ ಮಧ್ಯಪ್ರದೇಶದ ಬಾಲಘಾಟ್ ಪ್ರದೇಶದಲ್ಲಿ ನಡೆದಿದೆ.

ಜಿಲ್ಲೆಯ ಕಯಾಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಆರೋಪಿ ಮಹಿಳೆಯನ್ನು ಬಂಧಿಸಿ ಶುಕ್ರವಾರ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.

ಆರೋಪಿ ರಾಖಿ ಅಲಿಯಾಸ್ ರಾಜೇಶ್ವರಿ (26) ಒಂದು ತಿಂಗಳ ಹಿಂದೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು. ಈಗಾಗಲೇ ಎರಡು ಹೆಣ್ಣುಮಕ್ಕಳ ತಾಯಿಯಾಗಿದ್ದ ಆಕೆ ಮೂರನೆಯದಾದರೂ ಗಂಡಾಗುವುದೆಂಬ ನಿರೀಕ್ಷೆಯಲ್ಲಿದ್ದಳು. ಆದರೆ ಆಕೆಯ ನಿರೀಕ್ಷೆ ಹುಸಿಯಾದಾಗ ಮಗುವನ್ನು ನೀರಿನಲ್ಲಿ ಮುಳುಗಿಸಿ ಕೊಂದಿದ್ದಾಳೆ. ಬಳಿಕ ಕೂಸನ್ನು ಬೆಕ್ಕು ಹೊತ್ತಿಕೊಂಡು ಹೋಗಿ ನೀರಿಗೆಸೆದಿದೆ ಎಂದು ಪರಿವಾರದವರ ಮುಂದೆ ಕಥೆ ಕಟ್ಟಿದ್ದಾಳೆ. ಆಕೆಯ ಮಾತನ್ನು ನಂಬಿದ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡದೆ ಜುಲೈ 24 ರಂದೇ ಮಗುವನ್ನು ಮಣ್ಣು ಮಾಡಿದ್ದರು.

ಘಟನೆಯ ಮಾಹಿತಿ ಪಡೆದ ಪೊಲೀಸರು ಮಣ್ಣು ಮಾಡಲಾಗಿದ್ದ ಮಗುವಿನ ಶವವನ್ನು ಎತ್ತಿ ನೋಡಲಾಗಿ ನೀರಿನಲ್ಲಿ ಮುಳುಗಿ ಮಗು ಸತ್ತಿರುವುದು ಸಾಬೀತಾಗಿದೆ. ಆದರೆ ಬೆಕ್ಕಿ ಹೊತ್ತಿಕೊಂಡ ಹೋಗಿದ್ದಕ್ಕೆ ಆಧಾರವಾಗಿ ದೇಹದ ಮೇಲೆ ಯಾವುದೇ ಗುರುತುಗಳಿರಲಿಲ್ಲ. ವಿಚಾರಣೆ ಕೈಗೊಂಡ ಪೊಲೀಸರಿಗೆ ಘಟನೆ ನಡೆದ ದಿನ ಮನೆಯಲ್ಲಿ ಮಹಿಳೆಯೋರ್ವಳೇ ಇದ್ದಿದ್ದು ಬೆಳಕಿಗೆ ಬಂದಿದೆ. ಆಕೆಯನ್ನು ತೀವ್ರ ವಿಚಾರಣೆಗೊಳಪಡಿಸಲಾಗಿ ಸತ್ಯವನ್ನಾಕೆ ಬಾಯ್ಬಿಟ್ಟಿದ್ದಾಳೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪರಿಷ್ಕೃತ ಶಾಲಾ ಸಮಯವನ್ನು ಮುಂದುವರೆಸುವಂತೆ ಕೇರಳ ಸರ್ಕಾರ ಸೂಚನೆ

ಮೈಸೂರು ಮಹಾರಾಜರಿಗಿಂತಲೂ ಗ್ರೇಟ್ ನಮ್ಮಪ್ಪ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್‌

ವಿಮಾನದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ: ಏರ್‌ ಇಂಡಿಯಾ ಎಕ್ಸ್‌ಪ್ರೆಸ್ ಸಿಬ್ಬಂದಿ ಕಾರ್ಯಕ್ಕೆ ಭಾರೀ ಮೆಚ್ಚುಗೆ

ಪ್ಲಾಸ್ಟಿಕ್‌ ತ್ಯಾಜ್ಯದಿಂದ ರಸ್ತೆ ನಿರ್ಮಾಣ, ದ.ಕನ್ನಡ, ಉಡುಪಿ ಅಧಿಕಾರಿಗಳ ಬದ್ಧತೆಗೆ ಪ್ರಿಯಾಂಕ್ ಖರ್ಗೆ ಮೆಚ್ಚುಗೆ

ಮುಂದಿನ ಸುದ್ದಿ
Show comments