Select Your Language

Notifications

webdunia
webdunia
webdunia
webdunia

ಅರೆಬೆತ್ತಲೆ ಸ್ಥಿತಿಯಲ್ಲಿ ಮಹಿಳೆ ಪತ್ತೆ, ಮುಂದೇನಾಯ್ತು?

ಅರೆಬೆತ್ತಲೆ ಸ್ಥಿತಿಯಲ್ಲಿ ಮಹಿಳೆ ಪತ್ತೆ, ಮುಂದೇನಾಯ್ತು?
ಮುಂಬೈ , ಬುಧವಾರ, 29 ಡಿಸೆಂಬರ್ 2021 (08:29 IST)
ಮುಂಬೈ : ಅನುಮಾನಾಸ್ಪದ ರೀತಿಯಲ್ಲಿ ರಸ್ತೆ ಬದಿ ಗೋಣಿ ಚೀಲದಲ್ಲಿ ಮಹಿಳೆಯ ಅರೆಬೆತ್ತಲೆ ಶವ ಪತ್ತೆಯಾಗಿರುವ ಘಟನೆ ಮಹಾರಾಷ್ಟ್ರದ ರಾಯಗಢದಲ್ಲಿ ನಡೆದಿದೆ.
 
ಮೃತ ಮಹಿಳೆಯನ್ನು ಸ್ಥಳೀಯ ಗ್ರಾಮ ಪಂಚಾಯಿತಿಯ ಸರಪಂಚ್ ಎಂದು ಗುರುತಿಸಲಾಗಿದ್ದು, ಈ ಘಟನೆ ಮಹಾಡ್ ತಾಲೂಕಿನ ಬೆಳೋಶಿ ಗ್ರಾಮದಲ್ಲಿ ನಡೆದಿದೆ. ರಸ್ತೆಬದಿ ಎಸೆದಿದ್ದ ಗೋಣಿಚೀಲ ಗಮನಿಸಿದ ಕೆಲ ಯುವಕರು ಪರಿಶೀಲಿಸಲು ಮುಂದಾದಾಗ ಮಹಿಳೆ ಬೆತ್ತಲೆಯಾಗಿದ್ದು, ಆಕೆಯ ದೇಹದ ಮೇಲೆ ಗಾಯದ ಗುರುತುಗಳನ್ನು ಕಂಡು ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾರೆ. 

ನಂತರ ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಮಹಿಳೆಯ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಇದೀಗ ಪೊಲೀಸರು ಈ ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಲ್ಲದೇ ಮೃತ ಮಹಿಳೆಯ ಸಂಬಂಧಿಕರ ಹೇಳಿಕೆಗಳನ್ನು ಪಡೆದುಕೊಂಡಿದ್ದಾರೆ. 

ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆಯೇ ಎಂಬ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿಯ ಆಧಾರದ ಮೇಲೆ ಆರೋಪಿಗಳನ್ನು ಪತ್ತೆ ಹಚ್ಚಿ ಅವರ ವಿರುದ್ಧ ಎಫ್ಐಆರ್ ದಾಖಲಿಸುವುದಾಗಿ ತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಡ್ರೈವಿಂಗ್ ಕಲಿಯುತ್ತಿದ್ದಾಗ ವ್ಯಕ್ತಿಯ ಮೇಲೆ ಗಾಡಿಯನ್ನು ಹರಿಸಿದ!