Webdunia - Bharat's app for daily news and videos

Install App

ಕಾರಿನಲ್ಲಿಯೇ ಮಹಿಳೆಯ ಮೇಲೆ ಗ್ಯಾಂಗ್‌ರೇಪ್ ಎಸಗಿದ ಕಾಮುಕರು

Webdunia
ಸೋಮವಾರ, 15 ಮೇ 2017 (14:02 IST)
ಹರಿಯಾಣಾದ ರೋಹ್ಟಕ್‌ನಲ್ಲಿ ನಿರ್ಭಯಾ ಪ್ರಕರಣದಂತೆ ನಡೆದಿರುವ ಗ್ಯಾಂಗ್‌ರೇಪ್ ಮಾಸುವ ಮುನ್ನವೇ ಮೂವರು ಕಾಮುಕರ ಸಿಕ್ಕಿಂ ಮೂಲದ ಮಹಿಳೆಯನ್ನು ಅಪಹರಿಸಿ ಗ್ಯಾಂಗ್‌ರೇಪ್ ಎಸಗಿದ ಹೇಯ ಘಟನೆ ವರದಿಯಾಗಿದೆ. 
 
ಮಹಿಳೆ ತನ್ನ ಗೆಳೆಯನನ್ನು ಭೇಟಿ ಮಾಡಲು ಕನ್ಹಾಟ್ ಪ್ರದೇಶಕ್ಕೆ ತೆರಳಿದ್ದಳು. ನಂತರ ಬೆಳಗಿನ ಜಾವ 2 ಗಂಟೆಗೆ ಮನೆಗೆ ಮರಳುತ್ತಿರುವಾಗ, ಆರೋಪಿಗಳು ಮನೆಯ ಬಳಿಯೇ ಆಕೆಯನ್ನು ಸ್ವಿಫ್ಟ್ ಕಾರಿನಲ್ಲಿ ಅಪಹರಿಸಿ 20 ಕಿ.ಮೀ ದೂರದಲ್ಲಿರುವ ನಜಾಫ್‌ಗಢ್‌ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಚಲಿಸುತ್ತಿರುವ ಕಾರಿನಲ್ಲಿಯೇ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಆರೋಪಿಗಳು ಗ್ಯಾಂಗ್‌ರೇಪ್ ಎಸಗಿದ ನಂತರ ನಿರ್ಜನ ರಸ್ತೆಯ ಮೇಲೆ ಮಹಿಳೆಯನ್ನು ಎಸೆದು ಪರಾರಿಯಾಗಿದ್ದಾರೆ.
 
ದಾರಿಹೋಕರ ನೆರವು ಪಡೆದ ಮಹಿಳೆ ಪೊಲೀಸ್ ಠಾಣೆಗೆ ತೆರಳಿ ಮೂವರು ಆರೋಪಿಗಳ ವಿರುದ್ಧ ದೂರು ನೀಡಿದ್ದಾಳೆ. ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿಗಳ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿದ್ದು, ಶೀಘ್ರದಲ್ಲಿಯೇ ಆರೋಪಿಗಳನ್ನು ಬಂಧಿಸುವ ವಿಶ್ವಾಸವಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments