Webdunia - Bharat's app for daily news and videos

Install App

ಉತ್ತರಪ್ರದೇಶ: ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರಗೈದ ಆರು ಮಂದಿ ಆರೋಪಿಗಳು

Webdunia
ಗುರುವಾರ, 28 ಜನವರಿ 2016 (17:20 IST)
30 ವರ್ಷ ವಯಸ್ಸಿನ ಮಹಿಳೆಯನ್ನು ಅಪಹರಿಸಿದ ಆರು ಮಂದಿ ಕಾಮುಕರು ಆಕೆಯ ಮೇಲೆ ಗ್ಯಾಂಗ್‌ರೇಪ್ ಎಸಗಿ ಪರಾರಿಯಾದ ಘಟನೆ ವರದಿಯಾಗಿದೆ
 
ದಿಯೋಬಂದ್ ನಗರದಿಂದ ತನ್ನ ಬಾರ್ಕಲಿ ಗ್ರಾಮಕ್ಕೆ ಮರಳುತ್ತಿರುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. 
 
ಬಸ್ ನಿಲ್ದಾಣದಿಂದಿಳಿದು ತನ್ನ ಗ್ರಾಮಕ್ಕೆ ಮರಳುತ್ತಿರುವಾಗ ಮಾರ್ಗ ಮಧ್ಯದ ನಿರ್ಜನ ಪ್ರದೇಶದಲ್ಲಿ ಆಕೆಯನ್ನು ಒತ್ತಾಯಪೂರ್ವಕವಾಗಿ ಅಪಹರಿಸಿದ ಅರು ಮಂದಿ ಆರೋಪಿಗಳು ಅರಣ್ಯ ಪ್ರದೇಶದಲ್ಲಿಯೇ ನಿರಂತರವಾಗಿ ಅತ್ಯಾಚಾರವೆಸಗಿದ್ದಾರೆ. ಸಾಮೂಹಿತ ಅತ್ಯಾಚಾರವೆಸಗಿದ ನಂತರ ಆಕೆಯನ್ನು ಗಂಭೀರ ಸ್ಥಿತಿಯಲ್ಲಿಯೇ ಸ್ಥಳದಲ್ಲಿ ಬಿಟ್ಟು ಪರಾರಿಯಾಗಿದ್ದಾರೆ. 
 
ಕೆಲ ಹೊತ್ತಿನ ನಂತರ ಸುಧಾರಿಸಿಕೊಂಡ ಮಹಿಳೆ ಕೂಡಲೇ ಪೊಲೀಸ್ ಠಾಣೆಗೆ ತೆರಳಿ ಮಾಹಿತಿ ನೀಡಿದ್ದಾಳೆ. ಪೊಲೀಸರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ವೈದ್ಯಕೀಯ ಪರೀಕ್ಷೆಗೆಗೊಳಪಡಿಸಿದ್ದಾರೆ. ಪರೀಕ್ಷೆಯಲ್ಲಿ ಮಹಿಳೆಯ ಮೇಲೆ ಗ್ಯಾಂಗ್‌ರೇಪ್ ನಡೆದಿರುವುದು ಖಚಿತವಾದ ನಂತರ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
 
ಆರೋಪಿಗಳಾದ ಲಲಿತ್, ಪಂಕಜ್, ದೀಪಕ್, ತಾರಾ ಚಂದ್, ಸಂಜಯ್ ಮತ್ತೊಬ್ಬ ಅಪರಿಚಿತ ವ್ಯಕ್ತಿಯ  ಪತ್ತೆಗೆ ಪೊಲೀಸರು ತೀವ್ರ ಜಾಲ ಬೀಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments