Webdunia - Bharat's app for daily news and videos

Install App

ಸೆಕ್ಸ್ ನಿರಾಕರಿಸಿದ ಪತಿಯನ್ನೇ ಹತ್ಯೆಗೈದ ಪತ್ನಿ

Webdunia
ಮಂಗಳವಾರ, 14 ಜೂನ್ 2016 (12:22 IST)
ಸೆಕ್ಸ್‌ ನಿರಾಕರಿಸಿದ ಪತಿಯನ್ನೇ ಹತ್ಯೆಗೈದ ಮಹಿಳೆಗೆ ಸೆಷೆನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿ ಆದೇಶ ಹೊರಡಿಸಿದೆ
 
ಹೆಚ್ಚುವರಿ ಸೆಷೆನ್ಸ್ ನ್ಯಾಯಮೂರ್ತಿಗಳಾದ ಯು.ಎಂ.ಭಟ್ ನೇತೃತ್ವದ ನ್ಯಾಯಪೀಠ, 54 ವರ್ಷದ ಮಹಿಳೆ ವಿಮಲಾ ವಾಘೇಲಾಗೆ ಜೀವಾವಧಿ ಶಿಕ್ಷೆ ಮತ್ತು 2 ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ವಿಫಲವಾದಲ್ಲಿ ಮತ್ತೆ ಆರು ತಿಂಗಳುಗಳ ಕಾಲ ಶಿಕ್ಷೆ ಅನುಭವಿಸಬೇಕು ಎಂದು ತೀರ್ಪು ನೀಡಿದೆ. 
 
ಪ್ರಕರಣದ ವರದಿ ಪ್ರಕಾರ.  ಸರ್ದಾರ್‌ನಗರ ಪ್ರದೇಶದಲ್ಲಿರುವ ನೊಬ್ಲೆನಗರದಲ್ಲಿರುವ ಮನೆಯಲ್ಲಿ ವಿಮಲಾ ಮತ್ತು ಆಕೆಯ ಪತಿ ನರಸಿಂಹ ಮಾತ್ರ ಉಪಸ್ಥಿತರಿದ್ದರು.
 
ಮಧ್ಯಾಹ್ನ ಸುಮಾರು 1 ಗಂಟೆಯ ವೇಳೆಗೆ ಪತ್ನಿ ವಿಮಲಾ ಪತಿ ನರಸಿಂಹನಿಗೆ ಸೆಕ್ಸ್‌ನಲ್ಲಿ ಪಾಲ್ಗೊಳ್ಳುವಂತೆ ಒತ್ತಾಯಿಸಿದ್ದಾಳೆ. ಆದರೆ, ಪತಿ ನಿರಾಕರಿಸಿದ್ದಾನೆ. ಇದರಿಂದ ಕೋಪಗೊಂಡ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾಳೆ.
 
ಪತಿ ಅನೈತಿಕ ಸಂಬಂಧ ಹೊಂದಿರಬಹುದು. ಆದ್ದರಿಂದಲೇ ನನ್ನೊಂದಿಗೆ ಸೆಕ್ಸ್‌ನಲ್ಲಿ ಆಸಕ್ತಿ ತೋರಿಸುತ್ತಿಲ್ಲ ಎನ್ನುವ ಆಕ್ರೋಶದಿಂದ ಬಡಿಗೆಯನ್ನು ತೆಗೆದುಕೊಂಡು ತಲೆಯ ಮೇಲೆ ಬಾರಿಸಿದ್ದಾಳೆ. ಗಂಭೀರವಾಗಿ ಗಾಯಗೊಂಡ ಪತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.
 
ಪತಿಯ ಹತ್ಯೆ ನಂತರ, ಮನೆಯ ಬಾಗಿಲಿಗೆ ಬೀಗಹಾಕಿ ಪೊಲೀಸ್ ಠಾಣೆಗೆ ತೆರಳಿದ ಪತ್ನಿ ವಿಮಲಾ, ಪತಿಯ ಹತ್ಯೆಯಾಗಿದೆ ಎಂದು ಪೊಲೀಸರಿಗೆ ತಿಳಿಸಿದ್ದಾಳೆ.
 
ಪ್ರಕರಣದ ವಿಚಾರಣೆ ಆರಂಭಿಸಿದ ಪೊಲೀಸರಿಗೆ ವಿಮಲಾ ನಡುವಳಿಕೆಯ ಮೇಲೆ ಅನುಮಾನ ಬಂದು ವಿಚಾರಣೆ ನಡೆಸಿದಾಗ ಪತಿಯನ್ನು ತಾನೇ ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ. ಪೊಲೀಸರು ಆಕೆಯನ್ನು ಬಂಧಿಸಿ ನ್ಯಾಯಾಂಗದ ವಶಕ್ಕೆ ಒಪ್ಪಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಾ ರಘುವಂಶಿ ಪ್ರಕರಣ: ಸೋನಮ್ ಜತೆ ಸಂಪರ್ಕದಲ್ಲಿದ್ದ ಮತ್ತಿಬ್ಬರು ಅರೆಸ್ಟ್‌, ಇವರ ಪಾತ್ರವೇನು ಗೊತ್ತಾ

ದೊಡ್ಡ ದುರಂತ ಬೆನ್ನಲ್ಲೇ ಏರ್‌ ಇಂಡಿಯಾಗೆ ಬಾಂಬ್ ಬೆದರಿಕೆ: ನವದೆಹಲಿಗೆ ಹೊರಟಿದ್ದ ವಿಮಾನ ರಿಯಾದ್‌ನಲ್ಲಿ ತುರ್ತು ಭೂಸ್ಪರ್ಶ

ಬೃಹತ್‌ ರ‍್ಯಾಲಿ ವೇಳೆ ವೈಎಸ್‌ಆರ್‌ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹರಿದ ಜಗನ್‌ಮೋಹನ್‌ ರೆಡ್ಡಿ ಕಾರು

ಇರಾನ್‌– ಇಸ್ರೇಲ್‌ ಸಂಘರ್ಷ ಶಮನಕ್ಕೆ ಮೋದಿ ರಂಗಪ್ರವೇಶ: ಭಾರತದ ಪ್ರಧಾನಿಗೆ ಧನ್ಯವಾದ ಹೇಳಿದ ಇರಾನ್

ಬಿ.ಆರ್ ಪಾಟೀಲ್ ಸತ್ಯವನ್ನೇ ಹೇಳಿದ್ದಾರೆ : ವಿಜಯೇಂದ್ರ

ಮುಂದಿನ ಸುದ್ದಿ
Show comments