ಜನನಿಬಿಡ ಮಾರುಕಟ್ಟೆಯಲ್ಲಿ ದಂಪತಿ ಮೇಲೆ ಹಲ್ಲೆ ನಡೆಸಿ, ಮಹಿಳೆಯನ್ನು ಲೈಂಗಿಕವಾಗಿ ಶೋಷಿಸಿದ ಹೇಯ ಘಟನೆ ಉತ್ತರ ಪ್ರದೇಶದ ಮೈನ್ಪುರಿ ಜಿಲ್ಲೆಯಲ್ಲಿ ನಡೆದಿದೆ.
ದಂಪತಿ ತಾವು ಹೋಗಬೇಕಾದ ಸ್ಥಳದ ವಿಳಾಸವನ್ನು ವಿಚಾರಿಸುತ್ತಿದ್ದಾಗ, ದುಷ್ಕರ್ಮಿಯೊಬ್ಬ ಮಹಿಳೆಯ ದುಪಟ್ಟಾವನ್ನು ಎಳೆದಿದ್ದಾನೆ. ಆಗ ದಂಪತಿ ಅದಕ್ಕೆ ಪ್ರತಿರೋಧ ವ್ಯಕ್ತಪಡಿಸಿದಾಗ ದುಷ್ಕರ್ಮಿಗಳು ಕೋಲಿನಿಂದ ಮನಬಂದಂತೆ ಥಳಿಸಿದ್ದಾರೆ. ದಾಳಿಯಲ್ಲಿ ಮಹಿಳೆ ತಲೆಗೆ ಗಂಭೀರ ಗಾಯಗಳಾಗಿದ್ದು ರಕ್ತ ಸುರಿಯುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಹರಿದಾಡುತ್ತಿದೆ.
ದಾಳಿಕೋರರಲ್ಲಿ ಒಬ್ಬರನ್ನು ಆನಂದ ಯಾದವ್ ಎಂದು ಗುರುತಿಸಲಾಗಿದ್ದು, ಆತೆ ಮಹಿಳೆ ವಿರುದ್ಧ ಅಸಭ್ಯ ಪದಗಳನ್ನು ಸಹ ಬಳಸಿದ್ದಾನೆ ಎಂದು ತಿಳಿದು ಬಂದಿದೆ.
ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ದಂಪತಿ ಆರೋಪಿಗಳನ್ನು ಬಂಧಿಸದಿದ್ದರೆ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.