Webdunia - Bharat's app for daily news and videos

Install App

ಅನೈತಿಕ ಸಂಬಂಧ: ಮಹಿಳೆಯ ಎದೆಗೆ ಚಾಕುವಿನಿಂದ ಇರಿದ ದುಷ್ಕರ್ಮಿಗಳು

Webdunia
ಶುಕ್ರವಾರ, 6 ಜನವರಿ 2017 (14:01 IST)
ನಗರದ ರೇಸ್ ಕೋರ್ಸ್ ರಸ್ತೆಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬ 29 ವರ್ಷ ವಯಸ್ಸಿನ ಮಹಿಳೆಗೆ ಭೀಕರವಾಗಿ ಚಾಕುವಿನಿಂದ ಇರಿದ ಘಟನೆ ವರದಿಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ರೇಸ್ ಕೋರ್ಸ್ ರಸ್ತೆಯಲ್ಲಿ ಮಹಿಳೆಯೊಬ್ಬಳಿಗೆ ಚಾಕುವಿನಿಂದ ಇರಿಯಲಾಗಿದೆ ಎನ್ನುವ ಮಾಹಿತಿ ಪಡೆದ ಪೊಲೀಸರು ಕೂಡಲೇ ಸ್ಥಳಕ್ಕ ಧಾವಿಸಿ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ಫಲಕಾರಿಯಾಗಿದ್ದು ಅಪಾಯದಿಂದ ಪಾರಾಗಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ. 
 
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಅಪರಚಿತ ವ್ಯಕ್ತಿಯ ವಿರುದ್ಧ ಹತ್ಯಾಯತ್ನ ಸೇರಿದಂತೆ ಇತರ ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ವಿಚ್ಚೇದಿತಳಾಗಿರುವ ಮಹಿಳೆಗೆ ಒಂದು ಮಗುವಿದ್ದು, ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದಾಳೆ. ಕೆಲ ತಿಂಗಳುಗಳ ಹಿಂದೆ 22 ವರ್ಷದ ಯುವಕನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಳು ಎನ್ನಲಾಗಿದೆ.
 
ನಿನ್ನೆ ಸಂಜೆ ಸುಮಾರು 7.30 ಗಂಟೆಗೆ ಯುವಕ, ಮಹಿಳೆಯನ್ನು ಭೇಟಿ ಮಾಡಲು ತೆರಳಿದ್ದಾಗ ಆಕೆ ಮರದ ಕೆಳಗೆ ಗಂಭೀರವಾದ ಗಾಯಗಳೊಂದಿಗೆ ಕುಳಿತಿರುವುದು ಕಂಡು ಆಘಾತಗೊಂಡು ಪೊಲೀಸರಿಗೆ ಕರೆ ಮಾಡಿದ್ದಾನೆ.
 
ಪ್ರಕರಣದ ಬಗ್ಗೆ ತನಿಖೆ ಮುಂದುವರಿದಿದ್ದು ಶೀಘ್ರದಲ್ಲಿಯೇ ಆರೋಪಿಯನ್ನು ಬಂಧಿಸುವ ವಿಶ್ವಾಸವಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಾ ರಘುವಂಶಿ ಪ್ರಕರಣ: ಸೋನಮ್ ಜತೆ ಸಂಪರ್ಕದಲ್ಲಿದ್ದ ಮತ್ತಿಬ್ಬರು ಅರೆಸ್ಟ್‌, ಇವರ ಪಾತ್ರವೇನು ಗೊತ್ತಾ

ದೊಡ್ಡ ದುರಂತ ಬೆನ್ನಲ್ಲೇ ಏರ್‌ ಇಂಡಿಯಾಗೆ ಬಾಂಬ್ ಬೆದರಿಕೆ: ನವದೆಹಲಿಗೆ ಹೊರಟಿದ್ದ ವಿಮಾನ ರಿಯಾದ್‌ನಲ್ಲಿ ತುರ್ತು ಭೂಸ್ಪರ್ಶ

ಬೃಹತ್‌ ರ‍್ಯಾಲಿ ವೇಳೆ ವೈಎಸ್‌ಆರ್‌ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹರಿದ ಜಗನ್‌ಮೋಹನ್‌ ರೆಡ್ಡಿ ಕಾರು

ಇರಾನ್‌– ಇಸ್ರೇಲ್‌ ಸಂಘರ್ಷ ಶಮನಕ್ಕೆ ಮೋದಿ ರಂಗಪ್ರವೇಶ: ಭಾರತದ ಪ್ರಧಾನಿಗೆ ಧನ್ಯವಾದ ಹೇಳಿದ ಇರಾನ್

ಬಿ.ಆರ್ ಪಾಟೀಲ್ ಸತ್ಯವನ್ನೇ ಹೇಳಿದ್ದಾರೆ : ವಿಜಯೇಂದ್ರ

ಮುಂದಿನ ಸುದ್ದಿ
Show comments