Select Your Language

Notifications

webdunia
webdunia
webdunia
webdunia

ನಗ್ನ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ

ಕೊಲೆ
ಚಂಡೀಘಡ: ನಗ್ನ ಸ್ಥಿತಿಯಲ್ಲಿ 40 ವರ್ಷ ಸುಮಾರಿನ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಲೈಂಗಿಕ ಕಿರುಕುಳಕ್ಕೊಳಗಾಗಿ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಚಂಡೀಘಡ ಮಲೋಯ್ ಎಂಬ ಅರಣ್ಯ ಪ್ರದೇಶದಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಆಕೆಯ ದೇಹದಲ್ಲಿ ಯಾವುದೇ ಗಾಯಗಳೂ ಆಗಿಲ್ಲ. ಸದ್ಯಕ್ಕೆ ಪೊಲೀಸರು ಮೃತದೇಹವನ್ನು ಸರ್ಕಾರಿ ಆಸ್ಪತ್ರೆಯಲ್ಲಿರಿಸಿದ್ದಾರೆ.

ಮಹಿಳೆಯ ಪತಿ ತರಕಾರಿ ವ್ಯಾಪಾರಿಯಾಗಿದ್ದು, ಪತ್ನಿ ನಾಪತ್ತೆಯಾಗಿರುವ ಬಗ್ಗೆ ಇದಕ್ಕೂ ಮೊದಲೇ ದೂರು ಸಲ್ಲಿಸಿದ್ದ. ಅಂಗಡಿಗೆಂದು ಹೋಗಿದ್ದ ಪತ್ನಿ ಮರಳಲಿಲ್ಲವೆಂದು ದೂರಿನಲ್ಲಿ ತಿಳಿಸಿದ್ದ. ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೂರು ತಿಂಗಳಾದರೂ ಮಾಲಿಕನ ಸಮಾಧಿ ಬಿಟ್ಟು ಹೋಗದ ಬೆಕ್ಕು