Publish Date: Mon, 09 Jan 2023 (09:28 IST)
Updated Date: Mon, 09 Jan 2023 (09:31 IST)
ಪಾಟ್ನಾ : ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಜನಸಂಖ್ಯೆ ನಿಯಂತ್ರಣದ ಬಗ್ಗೆ ನೀಡಿರುವ ಅಭಿಪ್ರಾಯದಿಂದ ರಾಜಕೀಯ ಕೋಲಾಹಲ ಸೃಷ್ಟಿಯಾಗಿದೆ.
ನಿತೀಶ್ ಕುಮಾರ್ ತಮ್ಮ ಹೇಳಿಕೆಯಲ್ಲಿ ಮಹಿಳೆಯರನ್ನು ಅವಹೇಳನ ಮಾಡಿದ್ದಾರೆಂದು ಪ್ರತಿಪಕ್ಷಗಳು ತೀವ್ರ ತರಾಟೆಗೆ ತೆಗೆದುಕೊಂಡಿವೆ.
ಬಿಹಾರದ ವೈಶಾಲಿಯಲ್ಲಿ ನಡೆಯುತ್ತಿರುವ `ಸಮಾಧಾನ ಯಾತ್ರೆಯನ್ನುದ್ದೇಶಿಸಿ ಮಾತನಾಡಿದ ನಿತೀಶ್ ಕುಮಾರ್, ಜನಸಂಖ್ಯಾ ನಿಯಂತ್ರಣಕ್ಕೆ ಪುರುಷರು ಹೆಚ್ಚಿನ ಒಲವು ತೋರಬೇಕು.
ಮಹಿಳೆಯರು ಅವಿದ್ಯಾವಂತರಾಗಿದ್ದು, ಜನಸಂಖ್ಯೆ ನಿಯಂತ್ರಣದ ಕುರಿತು ಅವರಿಗೆ ಜ್ಞಾನ ಕಡಿಮೆ. ಹೀಗಾಗಿ ಪುರುಷರು ತಮ್ಮನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವ ಮೂಲಕ, ಜನಸಂಖ್ಯೆ ಹೆಚ್ಚಾಗದಂತೆ ನೋಡಿಕೊಳ್ಳಬೇಕು ಎಂದು ಪ್ರತಿಪಾದಿಸಿದ್ದಾರೆ.
Ramya kosira
Publish Date: Mon, 09 Jan 2023 (09:28 IST)
Updated Date: Mon, 09 Jan 2023 (09:31 IST)