Webdunia - Bharat's app for daily news and videos

Install App

Womens day special: ನಮ್ಮ ದೇಶದ ಮೊದಲ ಮಹಿಳಾ ಮುಖ್ಯಮಂತ್ರಿ ಯಾರೆಂದು ತಿಳಿಯಿರಿ

Krishnaveni K
ಶುಕ್ರವಾರ, 8 ಮಾರ್ಚ್ 2024 (08:56 IST)
Photo Courtesy: Twitter

ಬೆಂಗಳೂರು: ಇಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ. ಕುಟುಂಬದಿಂದ ಹಿಡಿದು ದೇಶದವರೆಗೂ ಶಕ್ತಿಯಾಗಿ ನಿಂತಿರುವ ಮಹಿಳೆಗೆ ಗೌರವ ಸಲ್ಲಿಸುವ ದಿನ. ಈ ಹಿನ್ನಲೆಯಲ್ಲಿ ನಮ್ಮ ದೇಶದ ಮೊದಲ ಮಹಿಳಾ ಮುಖ್ಯಮಂತ್ರಿ ಯಾರಾಗಿದ್ದರು ಅವರ ಹಿನ್ನಲೆಯೇನು ಎಂದು ತಿಳಿದುಕೊಳ್ಳೋಣ.


ನಮ್ಮ ದೇಶ ಇದೀಗ ಮಹಿಳಾ ರಾಷ್ಟ್ರಪತಿ, ನ್ಯಾಯಮೂರ್ತಿಗಳು, ಪೊಲೀಸ್ ಮಹಾನಿರ್ದೇಶಕರು, ಮುಖ್ಯಮಂತ್ರಿಗಳನ್ನು ಸಾಕಷ್ಟು ಕಂಡಿದೆ. ಆದರೆ ಮೊದಲ ಬಾರಿಗೆ ಒಂದು ರಾಜ್ಯದ ಮುಖ್ಯಮಂತ್ರಿಯಾದ ಮಹಿಳೆಯ ಯಾರು ಎಂದು ನಿಮಗೆ ಗೊತ್ತಾ? ಅವರು ಸುಚೇತಾ ಕೃಪಲಾನಿ.

ಸುಚೇತಾ 1963 ರಿಂದ 1967 ರವರೆಗೆ ಉತ್ತರ ಪ್ರದೇಶ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ್ದರು. ಅವರು ದೇಶದ ಮೊದಲ ಮಹಿಳಾ ಮುಖ್ಯಮಂತ್ರಿ ಎಂದು ಹೆಗ್ಗಳಿಕೆ ಹೊಂದಿದ್ದಾರೆ. ಅವರು ಉತ್ತರ ಪ್ರದೇಶ ರಾಜ್ಯದ ನಾಲ್ಕನೇ ಮುಖ್ಯಮಂತ್ರಿಯಾಗಿದ್ದರು. ಕಾನ್ಪುರ ವಿಧಾನಸಭೆ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಕಾಂಗ್ರೆಸ್ ಪಕ್ಷವನ್ನು ಪ್ರತಿನಿಧಿಸುತ್ತಿದ್ದ ಸುಚೇತಾ ದಕ್ಷ ಮುಖ್ಯಮಂತ್ರಿಯಾಗಿದ್ದರು.

ಚಿಕ್ಕವಯಸ್ಸಿನಲ್ಲೇ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದವರು. ಬಳಿಕ ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಭಾಗಿಯಾಗಿ ಜೈಲುವಾಸವನ್ನೂ ಅನುಭವಿಸಿದ್ದರು. ಭಾರತದ ಸಂವಿಧಾನ ರಚನೆ ಉಪಸಮಿತಿಯಲ್ಲಿ ಅವರೂ ಸದಸ್ಯರಾಗಿದ್ದರು.  1940 ರಲ್ಲಿ ಅಖಿಲ ಭಾರತ ಮಹಿಳಾ ಕಾಂಗ್ರೆಸ್ ನ್ನು ಸ್ಥಾಪಿಸಿದ ದಿಟ್ಟೆ. ಸ್ವಾತಂತ್ರ್ಯಾ ನಂತರ ಲೋಕಸಭೆ ಚುನಾವಣೆಗೂ ಸ್ಪರ್ಧಿಸಿದ್ದರು. 1971 ರಲ್ಲಿ ಅವರು ರಾಜಕೀಯದಿಂದ ನಿವೃತ್ತಿ ಪಡೆದರು. 1974 ರಲ್ಲಿ ಸುಚೇತಾ ನಿಧನರಾದರು. ಆದರೆ ಇಂದಿಗೂ ದೇಶ ಕಂಡ ದಕ್ಷ ಮುಖ್ಯಮಂತ್ರಿಗಳಲ್ಲಿ ಒಬ್ಬರಾಗಿ ಅವರನ್ನು ಗುರುತಿಸುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments