ಪ್ರಧಾನಮಂತ್ರಿಯವರ ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ್ ಸುಬ್ರಮಣ್ಯಂ ಅವರನ್ನು ವಜಾಗೊಳಿಸಬೇಕು ಎನ್ನುವ ಬಿಜೆಪಿ ಮುಖಂಡ ಸುಬ್ರಮಣ್ಯಂ ಸ್ವಾಮಿ ಹೇಳಿಕೆಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ಹೇಳಿದ್ದಾರೆ.
ಇದಕ್ಕಿಂತ ಮೊದಲು ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ್ ಮೇಲೆ ಸರಕಾರಕ್ಕೆ ಸಂಪೂರ್ಣ ವಿಶ್ವಾಸವಿದೆ ಎಂದು ಕೇಂದ್ರ ಸಚಿವ ಅರುಣ್ ಜೇಟ್ಲಿ ಹೇಳಿಕೆ ನೀಡಿದ ಮಾರನೇ ದಿನವೇ ಅವರನ್ನು ಕೇಂದ್ರ ಸರಕಾರ ವಜಾಗೊಳಿಸಬೇಕು ಎಂದು ಸ್ವಾಮಿ ಒತ್ತಾಯಿಸಿದ್ದಾರೆ.
ಒಂದು ವೇಳೆ ಬಿಜೆಪಿ ಅಥವಾ ಕೇಂದ್ರ ಸರಕಾರ ಯಾವುದೇ ಹೇಳಿಕೆ ನೀಡಿದ್ದರೆ ಅದಕ್ಕೆ ಪ್ರತಿಕ್ರಿಯೆ ನೀಡುತ್ತೇನೆ. ಸ್ವಾಮಿ ಹೇಳಿಕೆಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ನಮ್ಮದು ಪ್ರಜಾಪ್ರಭುತ್ವ ರಾಷ್ಟ್ರ. ಜನತೆ ತಮಗೆ ತೋಚಿದ್ದನ್ನು ಹೇಳುತ್ತಾರೆ. ಪ್ರತಿಯೊಬ್ಬರ ಹೇಳಿಕೆಗೆ ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ ಎಂದು ತಿರುಗೇಟು ನೀಡಿದರು.
ಕಳೆದ ಆಕ್ಟೋಬರ್ 2014ರಲ್ಲಿ ಅರವಿಂದ್ ಸುಬ್ರಹ್ಮಣ್ಯಂ ಮುಖ್ಯ ಆರ್ಥಿಕ ಸಲಹೆಗಾರರಾಗಿ ಮೋದಿ ಸರಕಾರ ನೇಮಕ ಮಾಡಿತ್ತು.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ
ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ