Select Your Language

Notifications

webdunia
webdunia
webdunia
Friday, 4 April 2025
webdunia

ತಮಗೆ ವಿಜಯೇಂದ್ರನೇ ನಕಲಿ ನೊಟೀಸ್ ಮಾಡಿಸಿ ಹಂಚಿದ್ದಾನೆ ಎಂದು ಯತ್ನಾಲ್‌ ಹೊಸ ವರಸೆ

BJP MLA Basan Gowda Patil Yatnal

Sampriya

ನವದೆಹಲಿ , ಸೋಮವಾರ, 2 ಡಿಸೆಂಬರ್ 2024 (14:08 IST)
ನವದೆಹಲಿ: ರಾಜ್ಯ ಬಿಜೆಪಿ ನಾಯಕರ ವಿರುದ್ಧ ಸದಾ ಟೀಕೆ ಮಾಡುತ್ತಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈಗ ಮತ್ತೊಂದು ಬಾಂಬ್‌ ಸಿಡಿಸಿದ್ದಾರೆ. ತಮಗೆ ವಿಜಯೇಂದ್ರನೇ ನಕಲಿ ನೊಟೀಸ್ ಮಾಡಿಸಿ ಹಂಚಿದ್ದಾನೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ನವದೆಹಲಿಯಲ್ಲಿ ಪ್ರತಿಕ್ರಿಯಿಸಿದ ಯತ್ನಾಳ್, ನನಗೆ ಈವರೆಗೂ ಅಧಿಕೃತವಾಗಿ ಪಕ್ಷದ ಕೇಂದ್ರ ಸಮಿತಿಯಿಂದ ನೊಟೀಸ್ ಬಂದಿಲ್ಲ, ವಾಟ್ಸ್‌ಆಪ್ ನಲ್ಲಿ ನೊಟೀಸ್ ಬಂದಿದೆ. ವಾಟ್ಸ್ ಆಪ್ ನಲ್ಲಿ ಬಂದಿರುವುದನ್ನು ಹೇಗೆ ನಂಬಲಿ. ವಿಜಯೇಂದ್ರನೇ ನಕಲಿ ನೊಟೀಸ್ ಮಾಡಿಸಿದ್ದಾನೆ ಎನಿಸುತ್ತಿದೆ. ಅಧಿಕೃತವಾಗಿ ನೊಟೀಸ್ ಬಂದ ಬಳಿಕ ಸರಿಯಾದ ಉತ್ತರ ನೀಡುತ್ತೇನೆ ಎಂದು ವರಸೆ ತೆಗೆದಿದ್ದಾರೆ.

ನಾನು ಸ್ವಂತ ಸಾಮರ್ಥ್ಯದ ಮೇಲೆ ನಾಯಕನಾಗಿದ್ದೀನಿ. ಯಡಿಯೂರಪ್ಪ ಭಯದಿಂದ ವಿಜಯೇಂದ್ರನನ್ನು ರಾಜ್ಯಾಧ್ಯಕ್ಷನನ್ನಾಗಿ ಮಾಡಿದ್ದಾರೆ, ವಿಜಯೇಂದ್ರ ಇನ್ನೂ ಸಣ್ಣ ಹುಡುಗ ಎಂದು ಟೀಕೆ ಮಾಡಿದರು.

ನೊಟೀಸ್ ಸಂಬಂಧ ನಾನು ಯಾವುದೇ ಹೈಕಮಾಂಡ್ ನಾಯಕರನ್ನೂ ಭೇಟಿ ಮಾಡುವುದಿಲ್ಲ. ನನಗೆ ಬಂದಿರುವ ನೊಟೀಸ್ ನಕಲಿ ಎಂದೆನಿಸುತ್ತಿದೆ. ವಿಜಯೇಂದ್ರ ಅವರಪ್ಪನ ಸಹಿ ಮಾಡಿ ಕಡತಗಳನ್ನು ರವಾನಿಸಿರುವ ಉದಾಹರಣೆಗಳಿವೆ. ಈ ಬಗ್ಗೆ ಹರಿಪ್ರಸಾದ್ ಆರೋಪ ಮಾಡಿದ್ದರು ಎಂದು ಯತ್ನಾಳ್ ಹೊಸ ಆರೋಪ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಭರ್ಜರಿ ಬ್ಯಾಟ್ ಬೀಸಿ ಕ್ರಿಕೆಟ್ ಮೈದಾನಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ