ಇಂದು ಉತ್ತರಪ್ರದೇಶ ಸಿಎಂ ಆಗಿ ಯೋಗಿ ಆದಿತ್ಯನಾಥ್ ಪ್ರಮಾಣ ವಚನ ಸ್ವೀಕಾರ

Webdunia
ಭಾನುವಾರ, 19 ಮಾರ್ಚ್ 2017 (11:28 IST)
ಬಿಜೆಪಿ ಮುಖಂಡ ಯೋಗಿ ಆದಿತ್ಯನಾಥ ಇಂದು ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
 
ಇಂದು ಮಧ್ಯಾಹ್ನ ಕಾನ್ಶಿರಾಮ್ ಮೈದಾನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಉತ್ತರಪ್ರದೇಶದ ರಾಜ್ಯಪಾಲ ರಾಮ್‌ ನಾಯಕ್, ನೂತನ ಸಿಎಂ ಆದಿತ್ಯನಾಥ್ ಹಾಗೂ ಅವರ ಸಚಿವ ಸಂಪುಟಕ್ಕೆ ಪ್ರಮಾಣ ವಚನ ಬೋಧಿಸಲಿದ್ದಾರೆ.  
 
ಬಿಜೆಪಿ ರಾಜ್ಯಾಧ್ಯಕ್ಷ ಕೇಶವ್ ಪ್ರಸಾದ್ ಮೌರ್ಯ ಮತ್ತು ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ದಿನೇಶ್ ಶರ್ಮಾ ಉಪ ಮುಖ್ಯಮಂತ್ರಿಯಾಗಲಿದ್ದಾರೆ. 
 
ಸಮಾರಂಭದಲ್ಲಿ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮತ್ತು ಬಿಜೆಪಿ ಅಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಪಾಲ್ಗೊಳ್ಳಲಿದ್ದಾರೆ.
 
ಗೋರಖ್‌ಪುರ್‌ ಲೋಕಸಭಾ ಕ್ಷೇತ್ರದಿಂದ ಐದು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಯೋಗಿ ಆದಿತ್ಯನಾಥ್ ಅವರನ್ನು ನಿನ್ನೆ ಸಂಜೆ ಅವಿರೋಧವಾಗಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿತ್ತು. ತದನಂತರ ಯೋಗಿ ಆದಿತ್ಯನಾಥ್ ರಾಜ್ಯಪಾಲರನ್ನು ಭೇಟಿಯಾಗಿ ಸರಕಾರ ರಚಿಸಲು ಆಹ್ವಾನ ನೀಡುವಂತೆ ಕೋರಿದ್ದರು. 
 
ರಾಜಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯೋಗಿ ಆದಿತ್ಯನಾಥ್, ಪ್ರಧಾನಮಂತ್ರಿಯವರ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಘೋಷಣೆಯನ್ನು ಪಾಲಿಸುವುದಾಗಿ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

ಹೈ ಫೈ ಇಂಗ್ಲಿಷ್, ದೊಡ್ಡ ದೊಡ್ಡ ಮಾತು: ದೆಹಲಿ ಬ್ಲಾಸ್ಟ್ ಉಗ್ರ ಉಮರ್ ವಿಡಿಯೋ ವೈರಲ್

Video: ಲಾರಿಯಡಿ ಸಿಲುಕಿ ಸ್ಥಳದಲ್ಲೇ ನರಳಾಡಿ ಪ್ರಾಣ ಬಿಟ್ಟ ದ್ವಿಚಕ್ರ ವಾಹನ ಸವಾರನನ್ನು ಕೇಳೋರೇ ಇಲ್ಲ

ಕಾರ್ಕಳ: ಮುಖ್ಯ ಶಿಕ್ಷಕರು ಹೇಳಿದ್ರೂ ಕೇಳದೇ ಜನಿವಾರ, ದಾರ ತೆಗೆಸುತ್ತಿದ್ದ ಶಿಕ್ಷಕ ಅಮಾನತು

ಮುಂದಿನ ಸುದ್ದಿ
Show comments