Select Your Language

Notifications

webdunia
webdunia
webdunia
webdunia

ತವರಿಗೆ ತೆರಳಿ ತಾಯಿ ಭೇಟಿಯಾದ ಯೋಗಿ ಆದಿತ್ಯನಾಥ್

ತವರಿಗೆ ತೆರಳಿ ತಾಯಿ ಭೇಟಿಯಾದ ಯೋಗಿ ಆದಿತ್ಯನಾಥ್
ಲಕ್ನೋ , ಬುಧವಾರ, 4 ಮೇ 2022 (09:44 IST)
ಲಕ್ನೋ : ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತಮ್ಮ ರಾಜಕೀಯ ಒತ್ತಡದ ನಡುವೆ ಹಲವು ವರ್ಷಗಳ ನಂತರ ತಾಯಿಯನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡಿದ್ದಾರೆ.

ತಾಯಿ ಸಾವಿತ್ರಾ ದೇವಿ ಅವರನ್ನು ಭೇಟಿಯಾಗಿ ಅವರ ಕಾಲುಗಳನ್ನು ಮುಟ್ಟಿ ನಮಸ್ಕರಿಸುತ್ತಿರುವ ಫೋಟೋವನ್ನು ಯೋಗಿ ಆದಿತ್ಯನಾಥ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. 

ಉತ್ತರಾಖಂಡದ ತಮ್ಮ ತವರು ನಗರವಾದ ಪೌರಿಯಲ್ಲಿರುವ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಹಲವು ವರ್ಷಗಳ ನಂತರ ತಮ್ಮ ತಾಯಿಯನ್ನು ಭೇಟಿಯಾಗಿದ್ದಾರೆ. ಬುಧವಾರ ನಿಗದಿಯಾಗಿರುವ ತನ್ನ ಸೋದರಳಿಯನ ಕೇಶಮುಂಡನ ಸಮಾರಂಭಕ್ಕಾಗಿ ಅವರು ತಮ್ಮ ಗ್ರಾಮಕ್ಕೆ ಭೇಟಿ ನೀಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ತಾಯಿಯ ಜೊತೆ ಮಲಗಿದ್ದವನ ಮರ್ಮಾಂಗವನ್ನೇ ಕಟ್ ಮಾಡಿದ ಮಗಳು!