ಯುವತಿಯರೇ ಇಂತಹ ಯುವಕರಿಂದ ಹುಷಾರ್: ಇವನು ಮಾಡಿದ್ದೇನು ನೋಡಿ

Webdunia
ಮಂಗಳವಾರ, 19 ಡಿಸೆಂಬರ್ 2023 (10:42 IST)
ತನ್ನನ್ನು ವಿವಾಹವಾಗಲು ಒಪ್ಪಿಕೊಂಡ ಹುಡುಗಿಯರಿಗೆ ಭಾವನಾತ್ಮಕ ಬ್ಲಾಕ್ಮೇಲ್ ಮಾಡಿದ ಆತ, ಆರೋಗ್ಯ ಸರಿಯಿಲ್ಲ ಎಂಬ ನೆಪ ಹೇಳಿ ತನ್ನ ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸುವಂತೆ ಹೇಳಿ ಅನಾಯಾಸವಾಗಿ ಹಣ ದೋಚಿದ. ಆರೋಪಿಯನ್ನು  ಸೈಬರ್ ಪೋಲಿಸರು ಬಂಧಿಸಿ, ವಿಚಾರಣೆ ನಡೆಸಿದ್ದಾರೆ. 
 
ವಂಚನೆ ಮಾಡಲು ವ್ಯಕ್ತಿಯೊಬ್ಬ ಎಷ್ಟು ಕೀಳುಮಟ್ಟಕ್ಕೆ ಇಳಿಯುತ್ತಾನೆನ್ನುವುದಕ್ಕೆ ಉದಾರಣೆಯಾಗಿ ಒಂದು ವಿಲಕ್ಷಣ ಘಟನೆಯೊಂದು ವರದಿಯಾಗಿದ್ದು, ಮುಂಬಯಿಯ  ಕಿರಣ್ ಬಾಗ್ವೆ ಎಂಬ ಯುವಕನೊಬ್ಬ ಮದುವೆಯ ಆಮಿಷ ಒಡ್ಡಿ ಸಾವಿರಕ್ಕಿಂತ ಹೆಚ್ಚು ಹುಡುಗಿಯರಿಗೆ ಮೋಸ ಮಾಡಿದ್ದಾನೆ ಎಂದು ಪೋಲಿಸ್ ಮೂಲಗಳು ತಿಳಿಸಿವೆ. 
 
ತಾನು 1236 ಯುವತಿಯರಿಗೆ ಮದುವೆಯ ಪ್ರಸ್ತಾಪದ ವಿನಂತಿ ಕಳುಹಿಸಿದ್ದೆ. ಅದರಲ್ಲಿ 1207 ಜನ ನನ್ನ ಬಲೆಗೆ ಬಿದ್ದರು. ಅವರಲ್ಲಿ ಹೆಚ್ಚಿನವರ ಬಳಿ ಅಸೌಖ್ಯದ ನೆಪ ಹೇಳಿ ಸಾಕಷ್ಟು ಮೊತ್ತದ ಹಣವನ್ನು ತನ್ನ ಬ್ಯಾಂಕ್ ಖಾತೆಗೆ  ವರ್ಗಾಯಿಸಿಕೊಂಡೆ " ಎಂದು ವಿಚಾರಣೆ ವೇಳೆ ಆತ ಪೋಲಿಸರಲ್ಲಿ ಬಾಯ್ಬಿಟ್ಟಿದ್ದಾನೆ. 
 
11ನೇ ತರಗತಿಯವರೆಗೆ ಓದಿರುವ ಆತ  ಕಳೆದ ವರ್ಷ ಪ್ರತಿಷ್ಠಿತ ಕಂಪನಿಯೊಂದರ ಉದ್ಯೋಗಿಯಾಗಿರುವ ಯುವತಿಯ ಬಳಿ ತಾನು ಎಂಜಿನಿಯರ್ ಎಂದು ಹೇಳಿ ಮದುವೆಯ ಪ್ರಸ್ತಾಪ ಇಟ್ಟಿದ್ದ. ಆಕೆ ಅವನನ್ನು ಒಪ್ಪಿಕೊಂಡಿದ್ದಳು. ಅವರಿಬ್ಬರು ಮೊಬೈಲ್ ಮತ್ತು ಇಂಟರ್‌ನೆಟ್ ಮೂಲಕ ನಿರಂತರ ಸಂಪರ್ಕದಲ್ಲಿದ್ದರು. 
 
ಒಂದು ದಿನ ಆಕೆಗೆ  ತಾನು ಗಂಭೀರ ಅನಾರೋಗ್ಯದ ಸಮಸ್ಯೆಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ಸಂದೇಶ ಕಳುಹಿಸಿದ.  ಆಕೆ ಅದನ್ನು ನಂಬಿದಳು. ಚಿಕಿತ್ಸೆಯ ನೆಪದಲ್ಲಿ ಆತ ಆಕೆಯಿಂದ ಸ್ವಲ್ಪ,ಸ್ವಲ್ಪ ಎಂದು 1 ಲಕ್ಷ, 57 ಸಾವಿರ ಹಣವನ್ನು ಲಪಟಾಯಿಸುವಲ್ಲಿ ಯಶಸ್ವಿಯಾದ. 
 
ಸತತವಾಗಿ ಆತನಿಗೆ ಹಣವನ್ನು ವರ್ಗಾಯಿಸುತ್ತಿದ್ದ ಆಕೆ ಒಂದು ದಿನ ನೀನು ಯಾವ ಆಸ್ಪತ್ರೆಯಲ್ಲಿ ದಾಖಲಾಗಿರುವೆ? ಎಂದು ಪ್ರಶ್ನಿಸಿದಾಗ ಆತನ ಉತ್ತರ ಮಾತ್ರ ಅಸ್ಪಷ್ಟವಾಗಿತ್ತು. ಸಂದೇಹಗೊಂಡ ಯುವತಿ ಮುಂಬಯಿ ಪೋಲಿಸ್ ಅಪರಾಧ ವಿಭಾಗದಲ್ಲಿ ದೂರು ದಾಖಲಿಸಿದಳು.  ತನಿಖೆ ನಡೆಸಿದ ಪೋಲಿಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಶಾಸಕ ಸತೀಶ್ ಸೈಲ್‌ಗೆ ಮತ್ತೇ ಜೈಲೇ ಗತಿ

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿ ಟೀ ಶರ್ಟ್‌ ಒಳಗಡೆ ಕೈ ಹಾಕಿ ವ್ಯಕ್ತಿಯಿಂದ ವಿಕೃತಿ, video

ಮನೆ ಬಿಟ್ಟು ಹೋದ ಪತ್ನಿ, ಮಗಳನ್ನು ಕೊಂದು, ವ್ಯಕ್ತಿ ಮಾಡಿದ್ದೇನು ಗೊತ್ತಾ

ರೈತನ ಕೊಂದು ತೊಡೆ, ತಲೆ ಭಾಗ ತಿಂದು ಹಾಕಿದ ಹುಲಿ, ಮೈಸೂರಿನಲ್ಲಿ ವ್ಯಾಘ್ರ ದಾಳಿಗೆ ಮೂರು ಬಲಿ

ಮುಂದಿನ ಸುದ್ದಿ
Show comments