Publish Date: Sun, 25 Sep 2022 (09:48 IST)
Updated Date: Sun, 25 Sep 2022 (07:50 IST)
ಚಂಡೀಗಢ : ಮೊಹಾಲಿಯ ಚಂಡೀಗಢ ವಿಶ್ವವಿದ್ಯಾಲಯದ ಹಾಸ್ಟೆಲ್ ವಾಶ್ರೂಮ್ನಲ್ಲಿ ವಿದ್ಯಾರ್ಥಿನಿಯೊಬ್ಬಳು ವಿಡಿಯೋ ರೆಕಾರ್ಡ್ ಮಾಡಿದ್ದ ಪ್ರಕರಣದಲ್ಲಿ,
ಆಕೆಗೆ ಬ್ಲ್ಯಾಕ್ಮೇಲ್ ಮಾಡಿದ ಆರೋಪದ ಮೇಲೆ ಪಂಜಾಬ್ ಪೊಲೀಸರು ಶನಿವಾರ ಅರುಣಾಚಲ ಪ್ರದೇಶದಲ್ಲಿ ಸೇನಾ ಸಿಬ್ಬಂದಿಯನ್ನು ಬಂಧಿಸಿದ್ದಾರೆ.
ಕಳೆದ ಶನಿವಾರ ವಿದ್ಯಾರ್ಥಿನಿಯೊಬ್ಬಳು ಬಾತ್ರೂಂ ವೀಡಿಯೋಗಳನ್ನು ಸೆರೆಹಿಡಿದು ತನ್ನ ಗೆಳೆಯನಿಗೆ ಕಳುಹಿಸುತ್ತಿದ್ದ ವಿಷಯ ಬೆಳಕಿಗೆ ಬಂದ ಬಳಿಕ ವಿಶ್ವವಿದ್ಯಾಲಯದ ಆವರಣದಲ್ಲಿ ಭಾರೀ ಪ್ರತಿಭಟನೆ ನಡೆದಿದೆ.
ಬಳಿಕ ವೀಡಿಯೋ ಸೆರೆಹಿಡಿದಿದ್ದ ವಿದ್ಯಾರ್ಥಿನಿ, ಪ್ರಕರಣಕ್ಕೆ ಸಂಬಂಧಿಸಿದ ಹಿಮಾಚಲ ಪ್ರದೇಶದ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದರು.
ಬಂಧಿತ ಆರೋಪಿಗಳಿಂದ ವಶಪಡಿಸಿಕೊಂಡ ಸಾಧನಗಳಿಂದ ಡಿಜಿಟಲ್ ಸಾಕ್ಷ್ಯಗಳನ್ನು ಪತ್ತೆಹಚ್ಚಿ ಇಂದು ಮೊಹಾಲಿಯ ಪೊಲೀಸರ ತಂಡ ಯೋಧ ಸಂಜೀವ್ ಸಿಂಗ್ನನ್ನು ಬಂಧಿಸಿದ್ದಾರೆ.