Select Your Language

Notifications

webdunia
webdunia
webdunia
webdunia

ತನ್ನ ಮೆಹಂದಿ ಕಾರ್ಯಕ್ರಮದಲ್ಲಿ ನೃತ್ಯ ಮಾಡುತ್ತಿದ್ದಾಗಲೇ ಕುಸಿದು ಯುವತಿ ಸಾವು

sreya jain

Sampriya

ಉತ್ತರಾಖಂಡ , ಬುಧವಾರ, 19 ಜೂನ್ 2024 (15:23 IST)
Photo Courtesy X
ಉತ್ತರಾಖಂಡ: ಮದುವೆಯ ಹಿಂದಿನ ದಿನ ತನ್ನ ಮೆಹೆಂದಿ ಕಾರ್ಯಕ್ರಮದಲ್ಲಿ ಸಂಭ್ರಮದಿಂದ ನೃತ್ಯ ಮಾಡುತ್ತಿರುವಾಗ ಯುವತಿ ಕುಸಿದು ಬಿದ್ದು ಮೃತಪಟ್ಟ ಘಟನೆ ಉತ್ತರಖಂಡದ ಡೆಹ್ರಾಡೂನ್‌ನಲ್ಲಿ ನಡೆದಿದೆ.

ಶ್ರೇಯಾ ಜೈನ್(28) ಮೃತ ವಧು. ದೆಹಲಿ ಮೂಲದವರಾದ ಶ್ರೇಯಾ ಕುಟುಂಬ ಡೆಹ್ರಾಡೂನ್‌ನ ಐಷಾರಾಮಿ ರೆಸಾರ್ಟ್‌ವೊಂದನ್ನು ಮದುವೆಯ ಸಂಭ್ರಮಾಚರಣೆಗಾಗಿ ಬುಕ್​​​ ಮಾಡಿತ್ತು. ಆದರಂತೆ ಮದುವೆಗೂ ಎರಡು ದಿನಗಳ ಹಿಂದೆ ರೆಸಾರ್ಟ್​​​ಗೆ ಬಂದಿದ್ದಾರೆ.

ಸಂತೋಷದಿಂದ ತುಂಬಿ ತುಳುಕುತ್ತಿದ್ದ ಮನೆಯಲ್ಲಿ ಇದೀಗ ನೀರವ ಮೌನ ಆವರಿಸಿದೆ.

ಮದುವೆಯ ಹಿಂದಿನ ದಿನ ಅದ್ದೂರಿಯಾಗಿ ಮೆಹಂದಿ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಯೋಜನೆ ಮಾಡಲಾಗಿತ್ತು. ಅದರಂತೆ ಸಂಗೀತ ಕಾರ್ಯಕ್ರಮಗಳೊಂದಿಗೆ ಮೆಹಂದಿ ಕಾರ್ಯಕ್ರಮ ಆರಂಭವಾಗಿದೆ.


ವಿಧಿ ವಿಪರ್ಯಾಸವೆಂಬಂತೆ ವಧು ಮೆಹಂದಿ ದಿನ ಡಾನ್ಸ್ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾಳೆ. ತಕ್ಷಣ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ ಯುವತಿ ಅದಾಗಲೇ ಸಾವನ್ನಪ್ಪಿದ್ದಾಳೆ.

Share this Story:

Follow Webdunia kannada

ಮುಂದಿನ ಸುದ್ದಿ

ದರ್ಶನ್ ಕೇಸ್ ನಲ್ಲಿ ಯಾರು ಒತ್ತಡ ಹಾಕಿದ್ರೂ ಡೋಂಟ್ ಕೇರ್ ಎಂದ ಸಿಎಂ ಸಿದ್ದರಾಮಯ್ಯ