Select Your Language

Notifications

webdunia
webdunia
webdunia
webdunia

ಜಪಾನ್ ಮಹಿಳೆಯ ಮೇಲೆ ಅತ್ಯಾಚಾರ: ಆರೋಪಿ ಯುವಕ ಅರೆಸ್ಟ್

ಜಪಾನ್ ಮಹಿಳೆಯ ಮೇಲೆ ಅತ್ಯಾಚಾರ: ಆರೋಪಿ ಯುವಕ ಅರೆಸ್ಟ್
ಕೋವಲಂ , ಸೋಮವಾರ, 28 ನವೆಂಬರ್ 2016 (12:10 IST)
ಕೇರಳದ ಕೋವಲಂ ಜಿಲ್ಲೆಯಲ್ಲಿ ಜಪಾನ್‌ ಮೂಲದ 35 ವರ್ಷ ವಯಸ್ಸಿನ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ ಕರ್ನಾಟಕದ 25 ವರ್ಷ ವಯಸ್ಸಿನ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
 
ಅತ್ಯಾಚಾರಕ್ಕೊಳಗಾದ ಜಪಾನ್ ಮಹಿಳೆ ನೀಡಿದ ದೂರಿನ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿ ತೇಜಾನನ್ನು ವಶಕ್ಕೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
 
ಪೊಲೀಸ್ ಮೂಲಗಳ ಪ್ರಕಾರ, ಆರೋಪಿ ತೇಜಾ ಶುಕ್ರವಾರದಂದು ರಾತ್ರಿ ಜಪಾನ್ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಆರೋಪಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಆರೋಪಿ ತೇಜಾ ಕುಟುಂಬ ಕೋವಲಂನಲ್ಲಿ ಕರಕುಶಲ ವಸ್ತುಗಳ ಮಳಿಗೆಯನ್ನು ಹೊಂದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ನೋಟು ನಿಷೇಧ ಕೋಲಾಹಲ: ಸಚಿವರೊಂದಿಗೆ ಸಭೆ ನಡೆಸಿದ ಪ್ರಧಾನಿ ಮೋದಿ