Select Your Language

Notifications

webdunia
webdunia
webdunia
webdunia

ರೈತ ಮಸೂದೆ ವಿರೋಧಿಸಿ ಯೂತ್ ಕಾಂಗ್ರೆಸ್ ಪ್ರತಿಭಟನೆ; ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ

ರೈತ ಮಸೂದೆ ವಿರೋಧಿಸಿ ಯೂತ್ ಕಾಂಗ್ರೆಸ್ ಪ್ರತಿಭಟನೆ; ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ
ನವದೆಹಲಿ , ಸೋಮವಾರ, 28 ಸೆಪ್ಟಂಬರ್ 2020 (10:15 IST)
ನವದೆಹಲಿ : ಎಪಿಎಂಸಿ, ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ವಿರೋಧಿಸಿ ಯೂತ್ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದಾರೆ.

ದೆಹಲಿಯ ಇಂಡಿಯಾ ಗೇಟ್ ಬಳಿ ಕಾಂಗ್ರೆಸ್ ಧರಣಿ ನಡೆಸುತ್ತಿದ್ದು, 15 ರಿಂದ 20 ಮಂದಿ ಪ್ರತಿಭಟನಾಕಾರರು ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿ ಹೊತ್ತಿ ಉರಿಯುತ್ತಿದ್ದ ಟ್ರ್ಯಾಕ್ಟರ್ ನ್ನು ತೆರವುಗೊಳಿಸಿದ್ದಾರೆ. ಹಾಗೇ ಟ್ರ್ಯಾಕ್ಟರ್ ಬೆಂಕಿ ಹಚ್ಚಿದವರನ್ನು ಪತ್ತೆ ಮಾಡಲು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಏರ್ ಪೋರ್ಟ್, ರೈಲ್ವೆ ಸ್ಟೇಷನ್ ಗೆ ಮುತ್ತಿಗೆ; 50ಕ್ಕೂ ಹೆಚ್ಚು ಕರವೇ ಕಾರ್ಯಕರ್ತರ ಬಂಧನ