ಯೋಗಿ ಸರ್ಕಾರದಿಂದ ಯುವಕರು ಉದ್ಯೋಗದಿಂದ ವಂಚಿತ : ಪ್ರಿಯಾಂಕಾ ಗಾಂಧಿ

Webdunia
ಬುಧವಾರ, 19 ಜನವರಿ 2022 (13:34 IST)
ನವದೆಹಲಿ : ಉತ್ತರ ಪ್ರದೇಶದಲ್ಲಿ ಉದ್ಯೋಗ ಹಾಗೂ ಶಿಕ್ಷಣದ ಸಮಸ್ಯೆಯ ಕುರಿತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ವಾಗ್ದಾಳಿ ನಡೆಸಿದರು.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಉತ್ತರ ಪ್ರದೇಶದಲ್ಲಿ ಕಳೆದ ಐದು ವರ್ಷಗಳಲ್ಲಿ 16.5 ಲಕ್ಷ ಯುವಕರು ಉದ್ಯೋಗ ಕಳೆದುಕೊಂಡಿದ್ದಾರೆ ಹಾಗೂ ನಾಲ್ಕು ಕೋಟಿ ಜನರು ಉದ್ಯೋಗದ ಭರವಸೆಯನ್ನು ಕಳೆದುಕೊಂಡಿದ್ದಾರೆ.

ಯೋಗಿ ಸರ್ಕಾರವು ಈ 5 ವರ್ಷದಲ್ಲಿ ಬಜೆಟ್ನಲ್ಲಿ ಶಿಕ್ಷಣಕ್ಕೆ ಅಧಿಕ ಒತ್ತನ್ನು ನೀಡಿಲ್ಲ. ಬಜೆಟ್ ಹೆಚ್ಚು ಇದ್ದರೆ, ಯುವಕರು ಉನ್ನತ ವಿಶ್ವವಿದ್ಯಾಲಯಗಳು, ಇಂಟರ್ ನೆಟ್, ವಿದ್ಯಾರ್ಥಿ ವೇತನಗಳು, ಗ್ರಂಥಾಲಯಗಳು ಮತ್ತು ಹಾಸ್ಟೆಲ್ಗಳನ್ನು ಬಳಸಿಕೊಳ್ಳಬಹುದಾಗಿತ್ತು. ಈ ರೀತಿ ವಂಚನೆ ಮಾಡಿದ ಸರ್ಕಾರಕ್ಕೆ ನಿಮ್ಮ ಮತದ ಮೂಲಕ ಉತ್ತರ ಕೊಡಬಹುದು ಎಂದು ಯುವಕರಲ್ಲಿ ಮನವಿ ಮಾಡಿಕೊಂಡರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments