ಲೋಕಸಭೆ ಚುನಾವಣೆ: ಬಿಜೆಪಿ ಲಿಸ್ಟ್ ನಲ್ಲಿ ಯುವರಾಜ್ ಸಿಂಗ್, ಅಕ್ಷಯ್ ಕುಮಾರ್, ಕಂಗನಾ ರನೌತ್

Krishnaveni K
ಶನಿವಾರ, 2 ಮಾರ್ಚ್ 2024 (09:25 IST)
ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ತನ್ನ ಮೊದಲ ಪಟ್ಟಿ ರೆಡಿ ಮಾಡಿಕೊಂಡಿದೆ. ಆ ಪಟ್ಟಿಯಲ್ಲಿ ಕ್ರಿಕೆಟಿಗ ಯುವರಾಜ್ ಸಿಂಗ್, ನಟ ಅಕ್ಷಯ್ ಕುಮಾರ್, ಕಂಗನಾ ರನೌತ್ ಇದ್ದಾರೆ ಎಂಬ ಮಾತು ಬಲವಾಗಿ ಕೇಳಿಬರುತ್ತಿದೆ.

ಕ್ರಿಕೆಟಿಗ ಯುವರಾಜ್ ಸಿಂಗ್ ನಿವಾಸಕ್ಕೆ ಇತ್ತೀಚೆಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿ ನೀಡಿದ್ದರು. ಇದಾದ ಬಳಿಕ ಯುವರಾಜ್ ಸಿಂಗ್ ಲೋಕಸಭೆಗೆ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಬಲವಾಗಿ ಕೇಳಿಬಂದಿತ್ತು. ಇದೀಗ ಬಿಜೆಪಿ ಮೊದಲ ಪಟ್ಟಿ ತಯಾರಿ ಮಾಡಿದ್ದು, ಆ ಪಟ್ಟಿಯಲ್ಲಿ ಯುವರಾಜ್ ಸಿಂಗ್ ಸ್ಥಾನ ಪಡೆದಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಆದರೆ ತನಗೆ ಚುನಾವಣೆಗೆ ಸ್ಪರ್ಧಿಸುವ ಇರಾದೆ ಇಲ್ಲ ಎಂದು ಯುವಿ ಹೇಳಿದ್ದಾರೆ. ಆದರೆ ಸ್ಟಾರ್ ಪ್ರಚಾರಕರಾಗಿ ಕೆಲಸ ಮಾಡುವ ಸಾಧ‍್ಯತೆ ಇಲ್ಲದಿಲ್ಲ.

Photo Courtesy: Twitter
ನಟ ಅಕ್ಷಯ್ ಕುಮಾರ್ ಕೂಡಾ ಲೋಕಸಭೆಗೆ ಸ್ಪರ್ಧಿಸಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಅಕ್ಷಯ್ ಕುಮಾರ್ ಈ ಹಿಂದೆ ಹಲವು ಬಾರಿ ಪ್ರಧಾನಿ ಮೋದಿ ಯೋಜನೆಗಳಿಗೆ ಬೆಂಬಲ ಸೂಚಿಸಿದ್ದರು. ಅವರನ್ನೂ ಬಿಜೆಪಿಗೆ ಕರೆತರುವ ಯತ್ನ ನಡೆದಿದೆ ಎನ್ನಲಾಗಿದೆ. ಚಾಂದಿನಿ ಚೌಕ್ ನಿಂದ ಅಕ್ಷಯ್ ಕುಮಾರ್ ರನ್ನು ಕಣಕ್ಕಿಳಿಸಲು ಮಾತುಕತೆ ನಡೆದಿದೆ ಎನ್ನಲಾಗಿದೆ.

Photo Courtesy: Twitter
ಅದೇ ರೀತಿ ಬಾಲಿವುಡ್ ನಟಿ ಕಂಗನಾ ರನೌತ್ ಹೆಸರೂ ಬಲವಾಗಿ ಕೇಳಿಬರುತ್ತಿದೆ. ಸದಾ ಬಿಜೆಪಿ ಮತ್ತು ಪ್ರಧಾನಿ ಮೋದಿ ಪರವಾಗಿ ಹೇಳಿಕೆ ನೀಡುವ ಕಂಗನಾ ನೇರ ನುಡಿಗಳಿಂದಲೇ ಎಲ್ಲರ ಕೆಂಗಣ್ಣಿಗೆ ಗುರಿಯಾಗುತ್ತಾರೆ. ಆದರೆ ಬಿಜೆಪಿ ಸೇರ್ಪಡೆ ಬಗ್ಗೆ ಈ ಮೊದಲು ಪರೋಕ್ಷವಾಗಿ ಹೇಳಿಕೊಂಡಿದ್ದರು. ಹೀಗಾಗಿ ಈ ಬಾರಿ ಅವರೂ ಲಿಸ್ಟ್ ನಲ್ಲಿದ್ದಾರೆ ಎಂಬ ಮಾತುಗಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಡ್ನಿಯಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ಯುಕೆ ಪ್ರಧಾನಿ ಮೊದಲ ರಿಯಾಕ್ಷನ್

2 ವರ್ಷದ ಬಾಲಕಿ ರೇಪ್ ಎಸಗಿ, ಹತ್ಯೆ ಮಾಡಿದವನಿಗೆ ಕ್ಷಮದಾನಕ್ಕೆ ನಿರಾಕರಿಸಿದ ರಾಷ್ಟ್ರಪತಿ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments