Webdunia - Bharat's app for daily news and videos

Install App

ಎಎಪಿ ಪಕ್ಷವನ್ನು ಗೆಲ್ಲಿಸುವುದು ನಮ್ಮ ಕೆಲಸವಲ್ಲ: ಆಪ್‌ ಸೋಲಿನ ಟೀಕೆಗೆ ಕಾಂಗ್ರೆಸ್‌ ತೀಷ್ಣ ಪ್ರತಿಕ್ರಿಯೆ

Sampriya
ಶನಿವಾರ, 8 ಫೆಬ್ರವರಿ 2025 (14:21 IST)
ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಡಳಿತರೂಢ ಆಮ್ ಆದ್ಮಿ ಪಕ್ಷದ ಸೋಲಿಗೆ ನಮ್ಮ ಪಕ್ಷ ಜವಾಬ್ದಾರಿಯಲ್ಲ. ಆ ಪಕ್ಷವನ್ನು ಗೆಲ್ಲಿಸುವುದು ನಮ್ಮ ಕೆಲಸವಲ್ಲ ಎಂದು ಕಾಂಗ್ರೆಸ್ ಹೇಳಿದೆ.

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಬಹುಮತದತ್ತ ಸಾಗಿದ್ದು, ಎಎಪಿ ಪಕ್ಷ ಸೋಲಿನತ್ತ ಮುಖ ಮಾಡಿದೆ. ಒಟ್ಟು 70ಕ್ಷೇತ್ರಗಳ ಪೈಕಿ ಬಿಜೆಪಿ 47 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಎಎಪಿ 23 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಕಾಯ್ದುಕೊಂಡಿದೆ. ಇನ್ನು ದೆಹಲಿ ಮುಖ್ಯಮಂತ್ರಿ ಅಭ್ಯರ್ಥಿ ಅರವಿಂದ್ ಕೇಜ್ರಿವಾಲ್ ಮತ್ತು ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೋಲು ಕಂಡಿದ್ದಾರೆ.

ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಮೈತ್ರಿಕೂಟದ ಮಿತ್ರಪಕ್ಷವಾಗಿರುವ ಎಎಪಿ ರಾಷ್ಟ್ರ ರಾಜಧಾನಿಯಲ್ಲಿ ಸತತ ಮೂರನೇ ಅವಧಿಗೆ ಗೆಲ್ಲುವ ಪ್ರಯತ್ನದಲ್ಲಿ ವಿಫಲವಾಗಿವೆ. ದೆಹಲಿ ಚುನಾವಣಾ ಫಲಿತಾಂಶ ಬೆನ್ನಲ್ಲೇ ಎಎಪಿ ಸೋಲಿಗೆ ಕಾಂಗ್ರೆಸ್ ಕಾರಣ ಎಂಬ ಟೀಕೆಗಳು ಉದ್ಭವಾಗಿದ್ದು, ಈ ಬಗ್ಗೆ ಕಾಂಗ್ರೆಸ್‌ ಖಾರವಾಗಿ ಪ್ರತಿಕ್ರಿಯೆ ನೀಡಿದೆ.

ಈ ಕುರಿತು ಮಾತನಾಡಿರುವ ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರಿನಾಟೆ, ಆಮ್ ಆದ್ಮಿ ಪಕ್ಷವನ್ನು ಗೆಲ್ಲಿಸುವುದು ಕಾಂಗ್ರೆಸ್‌ನ ಜವಾಬ್ದಾರಿಯಲ್ಲ. ಆಮ್ ಆದ್ಮಿ ಪಕ್ಷವನ್ನು ಗೆಲ್ಲಿಸುವ ಜವಾಬ್ದಾರಿ ಕಾಂಗ್ರೆಸ್‌ನ ಮೇಲಿಲ್ಲ. ನಾವು ಫಲವತ್ತಾದ ರಾಜಕೀಯ ಭದ್ರಕೋಟೆಗಳನ್ನು ಹುಡುಕುತ್ತೇವೆ ಮತ್ತು ಇವುಗಳನ್ನು ಗೆಲ್ಲಲು ಪ್ರಯತ್ನಿಸುತ್ತೇವೆ. ದೆಹಲಿಯು ನಾವು 15 ವರ್ಷಗಳಿಂದ ಸರ್ಕಾರದಲ್ಲಿರುವ ಸ್ಥಳವಾಗಿದೆ. ಇಲ್ಲಿ ಯಾವುದೇ ಪಕ್ಷದ ಮೇಲೂ ಕಾಂಗ್ರೆಸ್ ಅವಲಂಬಿತವಾಗಿಲ್ಲ ಎಂದು ಹೇಳಿದರು.

ನಮ್ಮ ಜವಾಬ್ದಾರಿ ಎಎಪಿಯನ್ನು ಗೆಲ್ಲಿಸುವುದು ಅಲ್ಲ. ನಮ್ಮ ಜವಾಬ್ದಾರಿ ಉತ್ಸಾಹಭರಿತ ಪ್ರಚಾರವನ್ನು ನಡೆಸುವುದು ಮತ್ತು ಈ ಚುನಾವಣೆಯಲ್ಲಿ (ಅಥವಾ ಯಾವುದೇ ಇತರ) ನಮಗೆ ಸಾಧ್ಯವಾದಷ್ಟು ಬಲವಾಗಿ ಸ್ಪರ್ಧಿಸುವುದು ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments