Select Your Language

Notifications

webdunia
webdunia
webdunia
webdunia

ಪಿಎಸ್ಐ ಆಗಿ 10ವರ್ಷ ಪೊರೈಸಿದ ಖುಷಿಯಲ್ಲಿ ಮಾಡ್ಬರ್ದು ಮಾಡಿ ಅಮಾನತು ಆದ ಪೋಲಿಸ್ ಅಧಿಕಾರಿ

PSI Rajshekar Rathod Case

Sampriya

ಯಾದಗಿರಿ , ಮಂಗಳವಾರ, 14 ಅಕ್ಟೋಬರ್ 2025 (22:37 IST)
Photo Credit X
ಯಾದಗಿರಿ: ಪಿಎಸ್‌ಐ ಆಗಿ 10 ವರ್ಷ ಪೂರೈಸಿದ್ದ ಖುಷಿಯಲ್ಲಿ ರೌಡಿಶೀಟರ್ ಜತೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದ ಅಧಿಕಾರಿಗೆ ಯಾದಗಿರಿ ಎಸ್ಪಿ ಪೃಥ್ವಿಕ್ ಶಂಕರ್ ಬಿಗ್ ಶಾಕ್ ನೀಡಿದ್ದಾರೆ.

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಠಾಣೆಯ ಪಿಎಸ್‌ಐ ಆಗಿರುವ ರಾಜಶೇಖರ್ ರಾಠೋಡ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಪಿಎಸ್‌ಐ ಆಗಿ ಹತ್ತು ವರ್ಷ ಪೊರೈಸಿದ್ದ ಖುಷಿಯಲ್ಲಿ  ಅದೇ ಠಾಣೆಯಲ್ಲಿ ರೌಡಿಶೀಟರ್ ಆಗಿರುವ ನಾಗರಾಜ್ ಜೊತೆ ಕೇಕ್ ಕಟ್ ಮಾಡಿ ಸೆಲೆಬ್ರೇಷನ್ ಮಾಡಿದ್ದರು.

 ಸಾಮಾಜಿಕ ಜಾಲತಾಣದಲ್ಲಿ ಫೋಟೋ ಕೂಡ ವೈರಲ್ ಆಗಿತ್ತು. ಸುದ್ದಿ ಪ್ರಸಾರವಾಗುತ್ತಿದ್ದಂತೆ ಯಾದಗಿರಿ ಎಸ್ಪಿ ಅಮಾನತು ಮಾಡಿದ್ದಾರೆ.

ಪೊಲೀಸ್ ಠಾಣೆಯ ಆವರಣದಲ್ಲಿಯೇ ರೌಡಿಶೀಟರ್ ನಾಗರಾಜ ಜೊತೆಗೆ ಶೆಟಲ್ ಕಾಕ್ ಆಡಿದ್ದರು. ಈ ಬಗ್ಗೆ ಇಲಾಖೆಯಿಂದ ತನಿಖೆ ನಡೆಸಲಾಗಿತ್ತು. ತನಿಖೆಯಲ್ಲಿ ಕರ್ತವ್ಯಲೋಪ ಹಾಗೂ ಶಿಸ್ತು ಉಲ್ಲಂಘನೆ ಬಯಲಾಗುತ್ತಿದ್ದಂತೆ ಎಸ್ಪಿ ಪೃಥ್ವಿಕ್ ಶಂಕರ್ ಅಮಾನತು ಮಾಡಿ ಆದೇಶಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಆತ್ಮಹತ್ಯೆಗೆ ಶರಣಾದ ಐಪಿಎಸ್ ಅಧಿಕಾರಿ ಪೂರಣ್ ಕುಮಾರ್ ಪ್ರಕರಣಕ್ಕೆ ಹೊಸ ಟ್ವಿಸ್ಟ್‌