ರೈಲಿನಿಂದ ಬಿದ್ದ ಬಾಲಕಿ: ನಡುರಾತ್ರಿಯಲ್ಲಿ 16 ಕಿ.ಮೀ ನಡೆದು ರಕ್ಷಿಸಿದ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ

Sampriya
ಬುಧವಾರ, 16 ಅಕ್ಟೋಬರ್ 2024 (14:13 IST)
Photo Courtesy X
Photo Courtesy X
ಬೆಂಗಳೂರು: ರೈಲಿನಿಂದ ಆಕಸ್ಮಿಕವಾಗಿ ಕೆಳಗೆ ಬಿದ್ದಿದ್ದ ಎಂಟು ವರ್ಷ ವಯಸ್ಸಿನ ಪುಟ್ಟ ಬಾಲಕಿಯನ್ನು ಉತ್ತರ ಪ್ರದೇಶದ ಪೊಲೀಸರು ರಕ್ಷಿಸಿರುವ ಘಟನೆ ನಡೆದಿದೆ. ಈ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ತನ್ನ ಪೋಷಕರೊಂದಿಗೆ ಝಾನ್ಸಿಯಿಂದ ಲಕ್ನೊಕ್ಕೆ ತೆರಳುತ್ತಿದ್ದ ಬಾಲಕಿ, ಝಾನ್ಸಿ ಬಳಿ ರಾತ್ರಿ ಆಯತಪ್ಪಿ ರೈಲಿನಿಂದ ಕೆಳಗೆ ಬಿದ್ದಿದ್ದಳು. ಕೂಡಲೇ ಪೋಷಕರು ಸಹಾಯವಾಣಿ 139 ಗೆ ಕರೆ ಮಾಡಿ ವಿಷಯ ತಿಳಿಸಿದ್ದರು.

ಝಾನ್ಸಿ ಆರ್‌ಪಿಎಫ್ ಪೊಲೀಸರು, ರೈಲ್ವೆ ಸಿಬ್ಬಂದಿ ಹಾಗೂ ಉತ್ತರ ಪ್ರದೇಶದ ಜಿಆರ್‌ಪಿ ಪೊಲೀಸರು ತಕ್ಷಣವೇ ಕಾರ್ಯಪೃವೃತ್ತರಾದರು. ನಡುರಾತ್ರಿಯಲ್ಲಿ 16 ಕಿ.ಮೀ ಕಾಲ್ನಡಿಗೆ ಮೂಲಕ ಟಾರ್ಚ್ ಬಳಸಿ ಹುಡುಕಾಟ ನಡೆಸಿದ್ದರು. ಲಲಿತಪುರ ಬಳಿ ಗಾಯಗೊಂಡು ಬಿದ್ದಿದ್ದ ಬಾಲಕಿಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಲಲಿತಪುರಕ್ಕೆ ಬಾಲಕಿಯನ್ನು ಕೊಂಡೊಯ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ. ಸದ್ಯ ಚೇತರಿಸಿಕೊಳ್ಳುತ್ತಿರುವ ಬಾಲಕಿ ಪೋಷಕರ ಮಡಿಲು ಸೇರಿದ್ದಾಳೆ. ಸಂಕಷ್ಟ ತಿಳಿದು ನಾವೆಲ್ಲ ಒಂದು ತಂಡವಾಗಿ ಚುರುಕಾಗಿ ಕೆಲಸ ಮಾಡಿದ್ದರಿಂದ ಇದು ಸಾಧ್ಯವಾಯಿತು ಎಂದು ಉತ್ತರ ಪ್ರದೇಶ ಪೊಲೀಸ್ ಎಕ್ಸ್ ತಾಣದಲ್ಲಿ ಈ ಕುರಿತು ಬರೆದುಕೊಂಡಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments