Select Your Language

Notifications

webdunia
webdunia
webdunia
webdunia

ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿ ಮೇಲೆ ಬಿದ್ದ ಫ್ಯಾನ್!

sslc exam fan ಫ್ಯಾನ್‌ ಎಸ್ಸೆಸ್ಸೆಲ್ಸಿ ಪರೀಕ್ಷೆ
bengaluru , ಮಂಗಳವಾರ, 3 ಮೇ 2022 (16:42 IST)
10ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದ ವೇಳೆ ಶಾಲೆಯಲ್ಲಿದ್ದ ಸೀಲಿಂಗ್ ಫ್ಯಾನ್ ಕೆಳಗೆ ಬಿದ್ದು ವಿದ್ಯಾರ್ಥಿನಿ ಮುಖಕ್ಕೆ ಗಾಯವಾದ ಘಟನೆ ಆಂಧ್ರಪ್ರದೇಶದ ಶ್ರೀಸತ್ಯ ಸಾಯಿ ಜಿಲ್ಲೆಯ ಸ್ಥಳೀಯ ಶಾಲೆಯಲ್ಲಿ ನಡೆದಿದೆ.
ಈ ಬಗ್ಗೆ ಶಾಲೆಯ ಪ್ರಾಂಶುಪಾಲರು ಮಾತನಾಡಿ, ಪರೀಕ್ಷೆಗೆ ಎರಡು ದಿನದ ಮೊದಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೂ ಇಂತಹ ಘಟನೆ ನಡೆದಿರುವುದು ದುರದೃಷ್ಟಕರವಾಗಿದೆ. ಈ ಬಗ್ಗೆ ಕ್ರಮವನ್ನು ಕೈಗೊಳ್ಳಲಾಗುವುದು ಎಂದರು. ಗಾಯಗೊಂಡ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ನಂತರ ಪುನಃ ಆಕೆ ಪರೀಕ್ಷೆಯನ್ನು ಬರೆದಿದ್ದಾಳೆ.
ಈ ಹಿಂದೆ ಏಪ್ರಿಲ್ 28 ರಂದು ಕರ್ನೂಲ್‍ನ ಗೋನೆಗಂಡ್ಲ್‍ದಲ್ಲಿರುವ ಮಂಡಲ ಪರಿಷತ್ ಉರ್ದು ಶಾಲೆಯಲ್ಲಿ ತರಗತಿ ನಡೆಯುತ್ತಿದ್ದಾಗ ಸೀಲಿಂಗ್ ಫ್ಯಾನ್‍ನ ಒಂದು ಭಾಗ ಬಿದ್ದು ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದರು.
ಘಟನೆಗೆ ಸಂಬಂಧಿಸಿ ಸರ್ಕಾರವನ್ನು ಪ್ರತಿಪಕ್ಷಗಳು ತರಾಟೆಗೆ ತೆಗೆದುಕೊಂಡಿದ್ದು, ವೈ.ಎಸ್. ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರವನ್ನು ದೂಷಿಸಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಕಳಪೆ ಮೂಲಭೂತ ಸೌಕರ್ಯವಿದೆ ಎಂದು ಟೀಕಿಸಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ದೇಶದಲ್ಲಿ ಕುಸಿದ ಕೊರೊನಾ: 2568 ಸೋಂಕು ಪತ್ತೆ