Select Your Language

Notifications

webdunia
webdunia
webdunia
webdunia

‘ಕಾಂಗ್ರೆಸ್ ಅಸ್ತಿತ್ವಕ್ಕೇ ಕುತ್ತು ಬಂದಿದೆ’

ಕಾಂಗ್ರೆಸ್
ಕೊಚ್ಚಿ: ಪ್ರಧಾನಿ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅಲೆಯಲ್ಲಿ ದೇಶದ ಹಿರಿಯ ಪಕ್ಷವೆನಿಸಿಕೊಂಡಿರುವ ಕಾಂಗ್ರೆಸ್ ಅಸ್ತಿತ್ವಕ್ಕೇ ಕುತ್ತು ಬಂದಿದೆ ಎಂದು ಕಾಂಗ್ರೆಸ್ ನ ಹಿರಿಯ ನಾಯಕ ಜೈ ರಾಂ ರಮೇಶ್ ಅಭಿಪ್ರಾಯಪಟ್ಟಿದ್ದಾರೆ.

 
ಬಿಜೆಪಿ ಅಲೆಯಲ್ಲಿ ಕಾಂಗ್ರೆಸ್ ಇತ್ತೀಚೆಗೆ ಮಂಕಾಗುತ್ತಿದೆ. ಸಂಸತ್ತಿನಲ್ಲೂ ಬಹುಮತ ಕಳೆದುಕೊಳ್ಳುತ್ತಿದೆ. ಅಷ್ಟೇ ಅಲ್ಲದೆ, ಚುನಾವಣೆಗಳಲ್ಲೂ ಹಿನ್ನಡೆ ಅನುಭವಿಸುತ್ತಿರುವ ಬೆನ್ನಲ್ಲೇ ರಮೇಶ್ ಈ ಹೇಳಿಕೆ ನೀಡಿರುವುದು ಭಾರೀ ಮಹತ್ವ ಪಡೆದಿದೆ.

1996 ರಿಂದ 2004 ರವರೆಗೆ ರಾಜಕೀಯ ಬಿಕ್ಕಟ್ಟು ಎದುರಿಸಿದ್ದಾಗ, 1977 ರ ತುರ್ತು ಪರಿಸ್ಥಿತಿ ನಂತರ ಪಕ್ಷದ ಸ್ಥಿತಿ  ಇದೇ ರೀತಿ ಇತ್ತು. ಆದರೆ ಈಗಂತೂ ಪಕ್ಷದ ಅಸ್ತಿತ್ವಕ್ಕೇ ಕುತ್ತು ಬಂದಿದೆ ಎಂದು ಅವರು ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ.. ಪ್ರಧಾನಿ ಮೋದಿ ಬಗ್ಗೆ ಚೀನಾ ಅಧ್ಯಕ್ಷರಿಗೆ ಭಯವಿದೆಯಂತೆ!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಧಾನಿ ಮೋದಿ ಬಗ್ಗೆ ಚೀನಾ ಅಧ್ಯಕ್ಷರಿಗೆ ಭಯವಿದೆಯಂತೆ!