Publish Date: Sat, 19 Aug 2017 (08:47 IST)
Updated Date: Sat, 19 Aug 2017 (08:52 IST)
ನವದೆಹಲಿ: ನಿತೀಶ್ ಕುಮಾರ್ ಬಿಹಾರ ಸಿಎಂ ಅಲ್ಲ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಕೆಲಸಗಾರನಂತೆ ಕೆಲಸ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
ನಿತೀಶ್ ಕುಮಾರ್ ಮಹಾಘಟಬಂಧನದಿಂದ ಹಿಂದೆ ಸರಿಯುತ್ತಿರುವುದಾಗಿ ಘೋಷಿಸಿದ ಬೆನ್ನಲ್ಲೇ ಕಾಂಗ್ರೆಸ್ ಈ ಆರೋಪ ಮಾಡಿದೆ.
‘ನಿತೀಶ್ ನಡೆಯಿಂದಾಗಿ ಅವರ ಪಕ್ಷದಲ್ಲಿರುವ ಹಲವು ನಾಯಕರು ಭಯಭೀತರಾಗಿದ್ದಾರೆ. ಇಂತಹ ಕೆಲಸವನ್ನು ಹಿಂದೆ ಯಾರೂ ಮಾಡಿಲ್ಲ. ನಿತೀಶ್ ಪಕ್ಷದ ನಾಯಕರ ಮಾನಸಿಕ ಸ್ಥೈರ್ಯ ಕಳೆದಿದ್ದಾರೆ. ಅವರೀಗ ದುರ್ಬಲ ಮುಖ್ಯಮಂತ್ರಿಯಾಗಿದ್ದಾರೆ. ತಮ್ಮ ಗೌರವವನ್ನು ತಾವೇ ಕಳೆದುಕೊಂಡು ಅಮಿತ್ ಶಾ ಪರವಾಗಿ ಕೆಲಸ ಮಾಡುತ್ತಿದ್ದಾರೆ’ ಎಂದು ಕಾಂಗ್ರೆಸ್ ನಾಯಕ ಸಂದೀಪ್ ದೀಕ್ಷಿತ್ ಕುಟುಕಿದ್ದಾರೆ.