Webdunia - Bharat's app for daily news and videos

Install App

ಕಾನೂನು ಸುವ್ಯವಸ್ಥೆ ಕಾಪಾಡುವುದು ಉ,ಪ್ರದೇಶ ಸರಕಾರದ ಹೊಣೆ: ಹೇಮಾಮಾಲಿನಿ

Webdunia
ಶನಿವಾರ, 4 ಜೂನ್ 2016 (15:16 IST)
ನಗರ ಹೊತ್ತಿ ಉರಿಯುತ್ತಿರುವಾಗ ಸಂಸದೆ ಹೇಮಾಮಾಲಿನಿ ಶೂಟಿಂಗ್ ಚಿತ್ರಗಳನ್ನು ಟ್ವಿಟ್ಟರ್‌ನಲ್ಲಿ ಅಪ್ಲೋಡ್ ಮಾಡುತ್ತಿದ್ದರು ಎನ್ನುವ ಆರೋಪಗಳಿಗೆ ತಿರುಗೇಟು ನೀಡಿದ ಸಂಸದೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಗುಡುಗಿದ್ದಾರೆ.
 
ಮಥುರಾ ನಗರದಲ್ಲಿ ಹಿಂಸಾಚಾರ ನಡೆದಿದೆ ಎನ್ನುವ ಸುದ್ದಿ ಬಿತ್ತರವಾಗುತ್ತಿದ್ದಂತೆ ಶೂಟಿಂಗ್‌ ಕ್ಯಾನ್ಸಲ್ ಮಾಡಿ ಕೇವಲ 24 ಗಂಟೆಗಳಲ್ಲಿ ನಗರಕ್ಕೆ ಆಗಮಿಸಿದ್ದೇನೆ. ಸಿಎಂ ಅಖಿಲೇಶ್ ಯಾದವ್ ಯಾಕೆ ಇನ್ನು ಘಟನಾ ಸ್ಥಳಕ್ಕೆ ಬಂದಿಲ್ಲ ಎಂದು ಪ್ರಶ್ನಿಸಿದರು.
 
ಕಳೆದ 10 ದಿನಗಳಿಂದ ನಾನು ಮಥುರಾದಲ್ಲಿಯೇ ವಾಸವಾಗಿದ್ದೆ. ಘಟನೆ ನಡೆಯುವ ಹಿಂದಿನ ದಿನ ನಾನೂ ಶೂಟಿಂಗ್‌ಗಾಗಿ ತೆರಳಬೇಕಾಗಿ ಬಂತು. ನನಗೆ ಬೇರೆ ಕೆಲಸಗಳು ಇರುತ್ತೇವೆ ಎನ್ನುವುದನ್ನು ಮರೆಯಬೇಡಿ ಎಂದು ಟೀಕಾಕಾರರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ಉತ್ತರ ಪ್ರದೇಶ ಸರಕಾರದ ವೈಫಲ್ಯದಿಂದಾಗಿ ಇಂತಹ ಹೇಯ ಘಟನೆ ನಡೆದಿದೆ ಎಂದು ಆರೋಪಿಸಿದ್ದಾರೆ.
 
ಉತ್ತರಪ್ರದೇಶದಲ್ಲಿ ಅಖಿಲೇಶ್ ಯಾದವ್ ಸರಕಾರ ಅಧಿಕಾರಕ್ಕೆ ಬಂದ ನಂತರ ಇಂತಹ ಘಟನೆಗಳು ನಡೆಯುತ್ತಿವೆ. ನಾನು ಸಂಸದೆಯಾಗಿ ಆಯ್ಕೆಯಾಗಿ ಬಂದ ನಂತರ ಜನತೆ ಅಭಿವೃದ್ಧಿಯ ಬಗ್ಗೆ ಮಾತನಾಡುತ್ತಿದ್ದಾರೆ. ನಾನು ಅಭಿವೃದ್ಧಿ ಕೆಲಸಗಳಲ್ಲಿ ಬಿಜಿಯಾಗಿದ್ದೇನೆ ಎಂದು ಬಿಜೆಪಿ ಸಂಸದೆ ಹೇಮಾಮಾಲಿನಿ ಹೇಳಿದ್ದಾರೆ.  

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ರಾಪ್ತ ಮಗಳ ಮೇಲೆ ಮೂರು ವರ್ಷ ಲೈಂಗಿಕ ದೌರ್ಜನ್ಯ: ಪಾಪಿ ಅಪ್ಪನಿಗೆ ಜೀವಾವಧಿ ಶಿಕ್ಷೆ

ಯೋಗಿ ಸಿಎಂ ಆದ್ಮೇಲೆ ಯುಪಿಯಲ್ಲಿ 15 ಸಾವಿರ ಎನ್‌ಕೌಂಟರ್‌, 30 ಸಾವಿರ ಕ್ರಿಮಿನಲ್‌ಗಳ ಅರೆಸ್ಟ್‌

ಜಮೀನು ಒತ್ತುವರಿ ಪ್ರಕರಣ: ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಕುಮಾರಸ್ವಾಮಿಗೆ ಬಿಗ್ ರಿಲೀಫ್‌

ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳ ಡಿಎನ್‌ಎ ಟೆಸ್ಟ್‌ಗೆ ಮುಂದಾದ ಪಂಜಾಬ್ ಸರ್ಕಾರ

ಶುಭಾಂಶು ಶುಕ್ಲಾ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಇಸ್ರೋ

ಮುಂದಿನ ಸುದ್ದಿ
Show comments