Webdunia - Bharat's app for daily news and videos

Install App

18ವರ್ಷ ಮೇಲ್ಪಟ್ಟ ಹೆಣ್ಮಕ್ಳಿಗೆ ಮಾಸಿಕ ₹1000: ನಾಳೆಯಿಂದ ನೋಂದಣಿ ಶುರು ಎಂದ ಕೇಜ್ರಿವಾಲ್

Sampriya
ಭಾನುವಾರ, 22 ಡಿಸೆಂಬರ್ 2024 (16:34 IST)
ನವದೆಹಲಿ: ಮುಂಬರುವ ದೆಹಲಿ ವಿಧಾನಸಭೆ ಚುನಾವಣೆ ಹಿನ್ನೆಲೆ ಈಗಾಗಲೇ ಎಎಪಿ ಪಕ್ಷವು ರಾಜಕೀಯ ಕಾರ್ಯತಂತ್ರ ರೂಪಿಸಿದ್ದು, ಅದರಂತೆ 18 ವರ್ಷ ಮೇಲ್ಪಟ್ಟ ಎಲ್ಲಾ ಹೆಣ್ಣು ಮಕ್ಕಳು ಹಾಗೂ ಮಹಿಳೆಯರಿಗೆ ಮಾಸಿಕ ₹1,000 ಒದಗಿಸುವ ಯೋಜನೆ ಪ್ರಾರಂಭವಾಗಲಿದೆ ಎಂದು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್‌ ಭಾನುವಾರ ಘೋಷಿಸಿದ್ದಾರೆ.

ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಾಳೆಯಿಂದ (ಡಿ.23) ಈ ಯೋಜನೆಗೆ ಚಾಲನೆ ದೊರೆಯಲಿದ್ದು, ಮಹಿಳೆಯರು ಅರ್ಜಿ ಸಲ್ಲಿಸಲು ಎಲ್ಲಿಯೂ ಹೋಗಬೇಕಿಲ್ಲ. ನಮ್ಮ ಸ್ವಯಂ ಸೇವಕರು ನಿಮ್ಮ ಮನೆ ಬಾಗಿಲಿಗೆ ಬಂದು ನೋಂದಾಯಿಸಿಕೊಳ್ಳುತ್ತಾರೆ. ಅರ್ಹತಾ ಗುರುತಿನ ಚೀಟಿ ತೋರಿಸಿ ಎಲ್ಲಾ ಮಹಿಳೆಯರು ಈ ಯೋಜನೆಯ ಲಾಭ ಪಡೆದುಕೊಳ್ಳಬಹುದು ಎಂದರು.

2024-25ರ ಬಜೆಟ್‌ನಲ್ಲಿ ದೆಹಲಿ ಸರ್ಕಾರವು 18 ವರ್ಷ ಮೇಲ್ಪಟ್ಟ ಎಲ್ಲಾ ಮಹಿಳೆಯರಿಗೆ ಮಾಸಿಕ ₹1,000 ನೀಡುವ ಯೋಜನೆ ಘೋಷಿಸಿತ್ತು. ಇತ್ತೀಚೆಗೆ ಚುನಾವಣಾ ಪ್ರಚಾರದಲ್ಲಿ ತಮ್ಮ ಪಕ್ಷ ಮತ್ತೆ ಅಧಿಕಾರಕ್ಕೆ ಬಂದರೆ ಈ ಮೊತ್ತವನ್ನು ₹2,100ಕ್ಕೆ ಹೆಚ್ಚಿಸಲಾಗುವುದು ಎಂದು ಕೇಜ್ರಿವಾಲ್‌ ಭರವಸೆ ನೀಡಿದ್ದರು.

ಅದಲ್ಲದೆ ಎಎಪಿ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಸಂಜೀವಿನಿ ಯೋಜನೆಯನ್ನು ಪ್ರಾರಂಭಿಸಲಾಗುವುದು ಎಂದರು. ಈ ಯೋಜನೆಯನ್ನು 60 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರು ಇದರ ಸದುಪಯೋಗ ಪಡೆಯಬಹುದಾಗಿದೆ ಎಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments