Webdunia - Bharat's app for daily news and videos

Install App

ಸಖತ್ ಟೇಸ್ಟ್ ಕೊಡುವ ಮಸಾಲಾ ಚಿಕನ್ ಲೆಗ್

Webdunia
ಭಾನುವಾರ, 19 ಡಿಸೆಂಬರ್ 2021 (12:47 IST)
ಸುಲಭ ಹಾಗೂ ಸರಳ ವಿಧಾನಗಳಿಂದ ಕೂಡಿರುವ ಅಡುಗೆಯನ್ನು ತಯಾರಿಸಲು ಪ್ರತಿಯೊಬ್ಬರು ಬಯಸುತ್ತೇವೆ.

ನಾವು ಇಂದು ಹೇಳಲು ಹೊರಟಿರುವ ಈ ಪಾಕವಿಧಾನವನ್ನು ನೀವು ಮನೆಯಲ್ಲಿ ತಯಾರಿಸಬಹುದು.

ಮಸಾಲಾ ಚಿಕನ್ ಲೆಗ್ನ್ನು ಮನೆಯಲ್ಲಿಯೇ ಸುಲಭವಾಗಿ  ತಯಾರಿಸಬಹುದು. ಚಿಕನ್ ಪ್ರಿಯರಿಗೆ ಇನ್ನಷ್ಟು ರುಚಿಕರವಾದ ಮತ್ತು ಬಾಯಲ್ಲಿ ನೀರೊರೆಸುವ ಈ ರೆಸಿಪಿ ಎಲ್ಲರಿಗೂ ಇಷ್ಟವಾಗುತ್ತದೆ. ಮನೆಯಲ್ಲೇ ಹೋಟೆಲ್ ಶೈಲಿಯ ರುಚಿ ಕೊಡುತ್ತದೆ ಈ ವಿಧಾನ ಟ್ರೈ ಮಾಡಿ

 
ಬೇಕಾಗುವ ಸಾಮಗ್ರಿಗಳು
* ಚಿಕನ್ ಲೆಗ್ಸ್ – 4
* ಕಾಳುಮೆಣಸು – 2 ಚಮಚ
* ಶುಂಠಿ – ಸ್ವಲ್ಪ
* ಬೆಳ್ಳುಳ್ಳಿ – 2
* ಮೆಣಸಿನ ಪುಡಿ- 2 ಚಮಚ
* ಚಿಕನ್ ಮಸಾಲಾ – 2 ಚಮಚ
* ಗೋಧಿ ಹಿಟ್ಟು – ಅರ್ಧ ಕಪ್
* ಅಡುಗೆ ಎಣ್ಣೆ – 2 ಕಪ್
* ರುಚಿಗೆ ತಕ್ಕಷ್ಟು ಉಪ್ಪು
* ಚಿಕನ್ ಮಸಾಲಾ- 1 ಪ್ಯಾಕೆಟ್ 

ಮಾಡುವ ವಿಧಾನ
* ಚಿಕನ್ ಲೆಗ್ಗಳನ್ನು ಚೆನ್ನಾಗಿ ತೊಳೆದು ಸ್ವಚ್ಚಗೊಳಿಸಿ.

* ಕಾಳುಮೆಣಸು, ಶುಂಠಿ, ಮೆಣಸಿನ ಹುಡಿ, ಹಾಗೂ ಬೆಳ್ಳುಳ್ಳಿ, ಚಿಕನ್ ಮಸಾಲಾವನ್ನು ಚೆನ್ನಾಗಿ ಮಿಶ್ರಣವನ್ನು ಮಾಡಿ. ಮತ್ತು ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ.  * ಚಿಕನ್ ಕಾಲುಗಳಿಗೆ ಈ ಮಸಾಲಾ ಮಿಶ್ರಣವನ್ನು ಸವರಿ ಹಾಗೂ 30 ನಿಮಿಷಗಳ ಕಾಲ ಇದನ್ನು ಹಾಗೆಯೆ ಬಿಡಿ.

* ಪ್ಯಾನ್ನಲ್ಲಿ ಎಣ್ಣೆ ಬಿಸಿ ಮಾಡಲು ಇಡಿ. ಅದು ಕಾಯುತ್ತಿದ್ದಂತೆ, ಗೋಧಿ ಹುಡಿಯಲ್ಲಿ ಚಿಕನ್ ಕಾಲುಗಳನ್ನು ಉರುಳಿಸಿ ಕಾದಿರುವ ಎಣ್ಣೆಗೆ ಹಾಕಿ ಮತ್ತು ಚೆನ್ನಾಗಿ ಬೇಯಿಸಿದರೆ ಚಿಕನ್ ಮಸಾಲಾ ಚಿಕನ್ ಲೆಗ್ ಸವಿಯಲು ಸಿದ್ಧವಾಗುತ್ತದೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಮೈಗ್ರೇನ್ ತಲೆನೋವಿದ್ದರೆ ಈ ಆಹಾರಗಳಿಂದ ದೂರವಿರಿ

ದಪ್ಪಗಿರುವ ಸೊಂಟ ತೆಳ್ಳಗಾಗಿಸಲು ಈ ಯೋಗಾಸನ ಮಾಡಿ

ಮಲೇರಿಯಾ ಜ್ವರ ತಡೆಗಟ್ಟಲು ಇಲ್ಲಿದೆ ಉಪಾಯ

ಸಿಹಿ ತಿಂದ ತಕ್ಷಣ ಹುಳಿ ಸೇವಿಸಬಾರದು ಯಾಕೆ

ಬಾಳೆಕಾಯಿ ಹಚ್ಚಿ ಕೈ ಕಪ್ಪಗಾಗಿದ್ದರೆ ಈ ಸಿಂಪಲ್ ಟ್ರಿಕ್ ಉಪಯೋಗಿಸಿ

ಮುಂದಿನ ಸುದ್ದಿ
Show comments