ಪೆಪ್ಪರ್ ಪೌಡರ್‍ನಿಂದ ಫಿಶ್ ಟೇಸ್ಟಿ ಫ್ರೈ

Webdunia
ಭಾನುವಾರ, 5 ಡಿಸೆಂಬರ್ 2021 (12:51 IST)
ಮೀನಿನ ಫ್ರೈಯನ್ನು ಈರುಳ್ಳಿ ಮತ್ತು ನಿಂಬೆ ಹಣ್ಣಿನ ಹೋಳಿನ ಜೊತೆಗೆ ಬಡಿಸಿ. ನಿಮ್ಮ ಕುಟುಂಬದ ಸದಸ್ಯರು ಖಂಡಿತವಾಗಿ ಈ ಭಾರತದ ಶೈಲಿಯ ಮೀನಿನ ಖಾದ್ಯವನ್ನು ಇಷ್ಟಪಡುತ್ತಾರೆ.
ಬೇಕಾಗುವ ಸಾಮಗ್ರಿಗಳು
* ಬಂಗುಡೆ ಮೀನು – ಅರ್ಧ ಕೆಜಿ
* ಕಾಳುಮೆಣಸಿನ ಪುಡಿ – 1 ಚಮಚ
* ಸೋಂಪು ಪುಡಿ – 1 ಚಮಚ
* ಕರಿಬೇವು- ಸ್ವಲ್ಪ
* ಶುಂಠಿ, ಬೆಳ್ಳುಳ್ಳಿ ಪೇಸ್ಟ್- 1 ಚಮಚ
* ಅಡುಗೆ ಎಣ್ಣೆ- 2 ಚಮಚ
* ಗರಂ ಮಸಾಲೆ- ಅರ್ಧ ಚಮಚ
* ನಿಂಬೆರಸ – 1 ಚಮಚ
* ಅರಿಶಿಣ – ಸ್ವಲ್ಪ
* ಖಾರದಪುಡಿ – ಅರ್ಧ ಚಮಚ
* ರುಚಿಗೆ ತಕ್ಕಷ್ಟು ಉಪ್ಪು
* ಜೀರಿಗೆ ಪೌಡರ್- ಅರ್ಧ ಚಮಚ
ಮಾಡುವ ವಿಧಾನ
* ಮೊದಲು ಮೀನನ್ನು ಚೆನ್ನಾಗಿ ತೊಳೆದುಕೊಂಡಿರಬೇಕು.
* ಒಂದು ಬೌಲ್ನಲ್ಲಿ ನಿಂಬೆರಸ, ಅರಿಶಿಣ, ಖಾರದಪುಡಿ, ರುಚಿಗೆ ತಕ್ಕಷ್ಟು ಉಪ್ಪು, ಜೀರಿಗೆ ಪೌಡರ್, ಕಾಳುಮೆಣಸಿನ ಪುಡಿ, ಸೋಂಪಿನ ಪುಡಿ, ಶುಂಠಿ, ಬೆಳ್ಳುಳ್ಳಿ ಪೇಸ್ಟ್, ಗರಂ ಮಸಾಲೆಯನ್ನು ಹಾಕಿ ಮಸಾಲೆಯನ್ನು ತಯಾರಿಸಿಕೊಂಡಿರಬೇಕು. 

* ಈಗಾಗಲೇ ನಾವು ತಯಾರಿಸಿದ ಮಸಾಲೆಯಲ್ಲಿ ಮೀನಿನ ತುಂಡುಗಳನ್ನು ಸೇರಿಸಿ ಕೆಲವು ನಿಮಿಷ ಹಾಗೆ ಇಟ್ಟಿರಬೇಕು. 
* ಪ್ಯಾನ್ ಬಿಸಿ ಮಾಡಿ ಅದಕ್ಕೆ ಅಡುಗೆಎಣ್ಣೆ ಹಾಕಿ ಬಿಸಿಯಾದ ನಂತರ ಅದರ ಮೇಲೆ ಮೀನಿನ ತುಂಡುಗಳನ್ನು ಇರಿಸಿ. ಎರಡೂ ಕಡೆ ಚೆನ್ನಾಗಿ ಬೇಯಿಸಿ. ಅದರ ಮೇಲೆ ಸೋಂಪು ಹಾಗೂ ಕಾಳುಮೆಣಸಿನ ಪುಡಿ ಉದುರಿಸಿದರೆ ರುಚಿಯಾದ ಬಂಗುಡೆ ಫ್ರೈ ಸವಿಯಲು ಸಿದ್ಧವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಉದ್ದಿನ ದೋಸೆ ತಿಂದು ಬೇಜಾರಾಗಿದ್ರೆ ಈ ರೀತಿ ಒಮ್ಮೆ ಟ್ರೈ ಮಾಡಿ

ಮಕ್ಕಳ ದಿನಾಚರಣೆ ಸ್ಪೆಷಲ್: ನಿಮ್ಮ ಮಕ್ಕಳು ಹೀಗಿದ್ದರೆ ಉದಾಸೀನ ಬೇಡ

ಆರೋಗ್ಯ ವೃದ್ಧಿಗಾಗಿ ಶ್ರೀ ಸುದರ್ಶನ ಮಂತ್ರ ಇಲ್ಲಿದೆ

ದೇಹದಲ್ಲಿ ನೀರಿನಂಶ ಹೆಚ್ಚಾದ್ರೂ ಅಪಾಯ ಕಟ್ಟಿಟ್ಟ ಬುತ್ತಿ

ರಾತ್ರಿ ಮಾಡುವ ಈ ಕೆಲಸ ನಿಮ್ಮ ಹೊಟ್ಟೆಗೆ ಸಂಚಕಾರ ತರುತ್ತದೆ

ಮುಂದಿನ ಸುದ್ದಿ
Show comments