Webdunia - Bharat's app for daily news and videos

Install App

ಭಾರತೀಯರ ಮನವರಳಿಸಿದ ವಿಜೇಂದ್ರ, ಸುಶೀಲ್

Webdunia
ಭಾರತಕ್ಕೆ ಬುಧವಾರ ಶುಭ ದಿನ. ಒಂದು ಕಡೆ ಭಾರತೀಯ ಕ್ರಿಕೆಟ್ ತಂಡವು ಸೋಲಿನ ದವಡೆಯಿಂದ ಪಾರಾಗಿ ಶ್ರೀಲಂಕಾ ವಿರುದ್ಧ ವಿಜಯ ಸಾಧಿಸಿದರೆ, ಇನ್ನೊಂದೆಡೆ ದೂರದ ಬೀಜಿಂಗ್‌ನಲ್ಲಿ ಒಲಿಂಪಿಕ್ಸ್ ಕೂಟದಲ್ಲಿ ಭಾರತದ ಬಾಕ್ಸಿಂಗ್ ಮತ್ತು ಕುಸ್ತಿ ಪಟುಗಳು ತ್ರಿವರ್ಣ ಧ್ವಜವನ್ನು ಎತ್ತರೆತ್ತರಕ್ಕೆ ಹಾರಿಸಿದ್ದಾರೆ.

WD
25 ರ ಹರೆಯದ ದೆಹಲಿಯ ಹುಡುಗ ಸುಶೀಲ್ ಕುಮಾರ್ ಅವರು 66 ಕೆಜಿ ಫ್ರೀ ಸ್ಟೈಲ್ ಕುಸ್ತಿ ವಿಭಾಗದಲ್ಲಿ ಭಾರತಕ್ಕೆ ಕಂಚು ತಂದಿತ್ತು 56 ವರ್ಷಗಳ ಬಳಿಕ ಕುಸ್ತಿಯಲ್ಲಿ ನಮ್ಮ ದೇಶಕ್ಕೆ ಹೆಮ್ಮೆ ತಂದಿತ್ತಿದ್ದಾರೆ. ಸುಶೀಲ್ ಅವರು ಆರಂಭಿಕ ಪಂದ್ಯದಲ್ಲಿ ಸೋತರೂ ರೆಪೆಶಾಜ್ ಪದ್ಧತಿಯ ಮೂಲಕ ಅದ್ಭುತವಾಗಿ ಚೇತರಿಸಿಕೊಂಡು, ಕೆಚ್ಚಿನ ಹೋರಾಟ ಪ್ರದರ್ಶಿಸಿ ಕಂಚಿನ ಪದಕ ಗಿಟ್ಟಿಸಿಕೊಂಡರು.

ಸುಶೀಲ್ ಕುಮಾರ್ ಅರ್ಜುನ ಪ್ರಶಸ್ತಿ ವಿಜೇತರೂ ಹೌದು. ಕೆನಡಾದ ಒಂಟಾರಿಯೋದಲ್ಲಿ ನಡೆದ ಕಾಮನ್ವೆಲ್ತ್ ಚಾಂಪಿಯನ್‌ಷಿಪ್ ಕೂಟದಲ್ಲಿ ಚಿನ್ನದ ಪದಕ ಗೆದ್ದಿದ್ದ ಸುಶೀಲ್, ಕೊರಿಯಾದ ಜೆಜು ದ್ವೀಪದಲ್ಲಿ ನಡೆದ 2008ರ ಹಿರಿಯ ಏಷ್ಯನ್ ಕುಸ್ತಿ ಚಾಂಪಿಯನ್‌ಷಿಪ್‌ನಲ್ಲಿ ಕಂಚು ಗೆದ್ದಿದ್ದಾರೆ. ಅಂತೆಯೇ 2006ರಲ್ಲಿ ಖತಾರ್‌ನ ದೋಹಾದಲ್ಲಿ ನಡೆದಿದ್ದ 15ನೇ ಏಷ್ಯನ್ ಗೇಮ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದು ತಮ್ಮ ಸಾಧನೆಯ ಗರಿಮೆ ಹೆಚ್ಚಿಸಿಕೊಂಡಿದ್ದಾರೆ.

WD
ಆ ಬಳಿಕ ಪದಕ ಖಚಿತಪಡಿಸಿಕೊಂಡವರು ಮತ್ತೊಬ್ಬ ಅರ್ಜುನ ಪ್ರಶಸ್ತಿ ವಿಜೇತ ಕ್ರೀಡಾಪಟು, 75 ಕೆಜಿ ವಿಭಾಗದ ಬಾಕ್ಸಿಂಗ್ ವೀರ ವಿಜೇಂದ್ರ ಕುಮಾರ್. ಇದುವರೆಗೆ ನಾಲ್ಕು ಪ್ರಮುಖ ಟೂರ್ನಿಗಳಲ್ಲಿ ಚಿನ್ನ ಗೆದ್ದಿರುವ ವಿಜೇಂದ್ರ ಕುಮಾರ್ 23ರ ಹರೆಯದವರು. ದೆಹಲಿಯಲ್ಲಿ 2007ರಲ್ಲಿ ನಡೆದ ರಾಷ್ಟ್ರೀಯ ಹಿರಿಯರ ಬಾಕ್ಸಿಂಗ್ ಚಾಂಪಿಯನ್‌ಷಿಪ್, ಅಕೋಲದಲ್ಲಿ 2008ರಲ್ಲಿ ನಡೆದ ಸೂಪರ್ ಕಪ್ ಅಂತರ್ ವಲಯ ರಾಷ್ಟ್ರೀಯ ಬಾಕ್ಸಿಂಗ್, 2008ರಲ್ಲಿ ಕಜಕಿಸ್ತಾನದಲ್ಲಿ ನಡೆದ 3ನೇ ಒಲಿಂಪಿಕ್ ಅರ್ಹತಾ ಟೂರ್ನಿ ಹಾಗೂ ಇದೇ ವರ್ಷ ಜರ್ಮನಿಯಲ್ಲಿ ನಡೆದ ಕೆಮಿಸ್ಟ್ರಿ ಕಪ್ ಬಾಕ್ಸಿಂಗ್ ಟೂರ್ನಮೆಂಟ್‌ಗಳಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಇದೀಗ ಬೀಜಿಂಗ್ ಒಲಿಂಪಿಕ್ ಕೂಟದಲ್ಲಿಯೂ ಚಿನ್ನದ ಪದಕದ ಮೇಲೆ ದೃಷ್ಟಿ ಇರಿಸಿದ್ದಾರೆ.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments