Webdunia - Bharat's app for daily news and videos

Install App

ಕೇರಳ ಕ್ರೀಡಾ ಸಚಿವರ ವಿರುದ್ಧ ದೂರು ನೀಡಿದ ಅಂಜು ಬಾಬ್ಬಿ ಜಾರ್ಜ್

Webdunia
ಗುರುವಾರ, 9 ಜೂನ್ 2016 (18:15 IST)
ಆಘಾತಕಾರಿ ಬೆಳವಣಿಗೆಯೊಂದರಲ್ಲಿ, ಭಾರತದ ಅಥ್ಲೀಟ್ ಅಂಜು ಬಾಬಿ ಜಾರ್ಜ್ ಗುರುವಾರ ಕ್ರೀಡಾ ಸಚಿವ ಇಪಿ ಜಯರಾಜನ್ ವಿರುದ್ಧ ದೂರನ್ನು ನೀಡಿದ್ದಾರೆ. ಕೇರಳ ಕ್ರೀಡಾ ಮಂಡಳಿಯ ಸದಸ್ಯರಿಗೆ ಮತ್ತು ತಮಗೆ ಜಯರಾಜನ್ ಕಿರುಕುಳ ನೀಡಿದ್ದಾರೆಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. 
 
ಸಚಿವರ ಸೌಜನ್ಯದ ಭೇಟಿ ಸಂದರ್ಭದಲ್ಲಿ ಜಯರಾಜನ್ ತಮ್ಮನ್ನು ಅವಮಾನಿಸಿ ಬೆದರಿಕೆ ಹಾಕಿದ್ದಾರೆಂದು ಅಂಜು ಆರೋಪಿಸಿದ್ದಾರೆ.  ನಾವು ಅಧಿಕಾರಕ್ಕೆ ಬರುವುದಿಲ್ಲವೆಂದು ಭಾವಿಸಿದ್ದೀರಾ, ಈಗ ಕಾದು ನೋಡಿ ಎಂದು ಸಚಿವರು ಅಂಜುಗೆ ಹೇಳಿದ್ದಾಗಿ ವರದಿಯಾಗಿದೆ.
 
ಈ ಘಟನೆಯಿಂದ ಬೇಸರಗೊಂಡ ಅಂಜು ಮುಖ್ಯಮಂತ್ರಿ ಪಿನಯರಾಯಿ ವಿಜಯನ್ ಅವರನ್ನು ಭೇಟಿ ಮಾಡಿ ದೂರಿನ ಪತ್ರವನ್ನು ಸಲ್ಲಿಸಿದರು.  ಸಚಿವರು ಎಲ್ಲರನ್ನೂ ವಿರೋಧ ಪಕ್ಷದ ಬೆಂಬಲಿಗರು ಎಂದು ಆರೋಪಿಸಿ, ಎಲ್‌ಡಿಎಫ್ ಅಧಿಕಾರದಲ್ಲಿರುವುದರಿಂದ ಪರಿಣಾಮ ನೆಟ್ಟಗಿರುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆಂದು ಅಂಜು ದೂರಿನಲ್ಲಿ ತಿಳಿಸಿದ್ದಾರೆ. 
 
ಬಾಕ್ಸಿಂಗ್ ಲೆಜೆಂಡ್ ಮಹಮ್ಮದ್ ಅಲಿ ಸಾವು ಕೇರಳಕ್ಕೆ ತುಂಬಾ ನಷ್ಟವಾಗಿದ್ದು, ಅವರು ರಾಜ್ಯಕ್ಕೆ ಅನೇಕ ಪದಕಗಳನ್ನು ಗೆದ್ದಿದ್ದಾರೆ ಎಂದು ಜಯರಾಜನ್ ಹೇಳುವ ಮೂಲಕ ಮುಖಪುಟ ಸುದ್ದಿಯಾಗಿದ್ದರು. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments