Webdunia - Bharat's app for daily news and videos

Install App

ಗುಜರಾತ್ ದಂಗೆಗೆ ಮೋದಿ ಸರಕಾರ ಪರೋಕ್ಷ ಬೆಂಬಲ: ರಾಹುಲ್ ಗಾಂಧಿ

Webdunia
ಮಂಗಳವಾರ, 28 ಜನವರಿ 2014 (15:08 IST)
PTI
ಭಾರತೀಯ ಜನತಾ ಪಕ್ಷದ ಪ್ರಧಾನಿ ಅಭ್ಯರ್ಥಿ ಹಾಗೂ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ವಿರುದ್ಧ ನೇರವಾಗಿಯೇ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು, 2002ರಲ್ಲಿ ನಡೆದ ಗುಜರಾತ್ ಗಲಭೆಯಲ್ಲಿ ಮೋದಿ ಸರ್ಕಾರ ಭಾಗಿಯಾಗಿದೆ ಎಂದು ಆರೋಪಿಸಿದ್ದಾರೆ.

ಮೊದಲ ಬಾರಿಗೆ ಆಂಗ್ಲ ಸುದ್ದಿವಾಹಿನಿಯೊಂದಕ್ಕೆ ಸಂದರ್ಶನ ನೀಡಿರುವ ರಾಹುಲ್, 1984ರ ಸಿಖ್ ಗಲಭೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರವನ್ನು ಸಮರ್ಥಿಸಿಕೊಂಡಿದ್ದಾರೆ. 2002ರ ಗಲಭೆಯಲ್ಲಿ ಗುಜರಾತ್ ಸರ್ಕಾರದ ಕೈವಾಡ ಇದ್ದು, 1984ರಲ್ಲಿ ದೆಹಲಿಯಲ್ಲಿ ನಡೆದ ಸಿಖ್‌ ನರಮೇಧ ಮತ್ತು ಗುಜರಾತ್ ಹತ್ಯ ಾ­ ಕಾಂಡಕ್ಕೂ ಹೋಲಿಕೆ ಮಾಡುವುದು ಸರಿಯಲ್ಲ ಎಂದರು. ಅಲ್ಲದೆ 1984 ಗಲಭೆಯನ್ನು ನಿಯಂತ್ರಿಸಲು ಕಾಂಗ್ರೆಸ್ ಸರ್ಕಾರ ಯತ್ನಿಸಿತ್ತು ಎಂದು ಹೇಳಿದ್ದಾರೆ.

ಇದೇ ವೇಳೆ 1984ರ ಗಲಭೆಯಲ್ಲಿ ಕೆಲವು ಕಾಂಗ್ರೆಸ್ ನಾಯಕರು ಭಾಗಿಯಾಗಿರುವ ಸಾಧ್ಯತೆಗಳಿದ್ದು, ಆ ಕುರಿತು ಕಾನೂನು ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದರು.

ಇನ್ನು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಭರ್ಜರಿ ಜಯ ಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ರಾಹುಲ್, ಒಂದು ವೇಳೆ ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಿದರೆ ಪಕ್ಷದ ಉಪಾಧ್ಯಕ್ಷನಾಗಿ ಸೋಲಿನ ಹೊಣೆಯನ್ನು ನಾನೇ ಹೊತ್ತುಕೊಳ್ಳುತ್ತೇನೆ ಎಂದಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments