ಬಾಳೆಹಣ್ಣು ಖರ್ಜೂರದ ಮಿಲ್ಕ್‌ಶೇಕ್

Webdunia
ಸೋಮವಾರ, 18 ಮಾರ್ಚ್ 2019 (16:22 IST)
ಸಾಮಾನ್ಯವಾಗಿ ಬಾಳೆಹಣ್ಣು ಎಲ್ಲರ ಮನೆಯಲ್ಲಿಯೂ ಸಿಗುವಂತಹ ಹಣ್ಣಾಗಿದೆ. ಬಾಳೆಹಣ್ಣಿನಿಂದ ಮಾಡುವ ಖಾದ್ಯಗಳೂ ಬಲು ರುಚಿಕರವಾಗಿರುತ್ತದೆ. ನಾವು ಮನೆಯಲ್ಲಿಯೇ ಸುಲಭವಾಗಿ ರುಚಿಕರವಾದ ಬಾಳೆಹಣ್ಣು ಮತ್ತು ಖರ್ಜೂರವನ್ನು ಬಳಸಿ ಮಿಲ್ಕ್ ಶೇಕ್ ಅನ್ನು ತಯಾರಿಸಿಕೊಂಡು ಸವಿಯಬಹುದು. ಹಾಗಾದರೆ ಇದನ್ನು ಹೇಗೆ ತಯಾರಿಸಬಹುದು ಎಂಬುದನ್ನು ನೋಡೋಣ.
   ತಯಾರಿಸಲು ಬೇಕಾಗುವ ಸಾಮಗ್ರಿಗಳು:
* ಖರ್ಜೂರ 10 
* ಬಾಳೆಹಣ್ಣು 3 
* ಸಕ್ಕರೆ 4 ಟೀ ಚಮಚ
* ಐಸ್‌ಕ್ಯೂಬ್ ಸ್ವಲ್ಪ
* ಗಟ್ಟಿ ಹಾಲು 1/2 ಲೀಟರ್
 
    ತಯಾರಿಸುವ ವಿಧಾನ:
   ಮೊದಲು ಮಿಕ್ಸಿಯಲ್ಲಿ ಬೀಜ ತೆಗೆದ ಖರ್ಜೂರ, ಸಕ್ಕರೆ ಮತ್ತು ಹಾಲನ್ನು ಹಾಕಿ ನುಣ್ಣಗೆ ರುಬ್ಬಿಕೊಳ್ಳಬೇಕು. ನಂತರ ಅದಕ್ಕೆ ಬಾಳೆಹಣ್ಣನ್ನು ಸೇರಿಸಿ ಮತ್ತು ಐಸ್‌ಕ್ಯೂಬ್ ಅನ್ನು ಸೇರಿಸಿ ಸ್ವಲ್ಪ ನುಣ್ಣಗಾಗಿಸಿಕೊಳ್ಳಬೇಕು. ಅದನ್ನು ಚೆನ್ನಾಗಿ ಮಿಶ್ರಮ ಮಾಡಿಕೊಳ್ಳಬೇಕು. ನಂತರ ಗ್ಲಾಸ್‌ನಲ್ಲಿ ಹಾಕಿ ಸರ್ವ್ ಮಾಡಿದರೆ ರುಚಿಕರವಾದ ಮತ್ತು ಆರೋಗ್ಯಕರವಾದ ಮಿಲ್ಕ್ ಶೇಕ್ ಸವಿಯಲು ಸಿದ್ದ. ಈ ಜ್ಯೂಸ್ ಡಯಟ್ ಮಾಡುವವರಿಗೆ ಬಹಳ ಉಪಯುಕ್ತವಾಗಿದೆ. (ಇದಕ್ಕೆ ಸಕ್ಕರೆ ಹಾಕದೇ ಇದ್ದರೂ ಚೆನ್ನಾಗಿರುತ್ತದೆ)

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮನೆ ಸುತ್ತಮುತ್ತಾ ಸಿಗುವ ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು ಇಲ್ಲಿದೆ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮರುವಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಮುಂದಿನ ಸುದ್ದಿ
Show comments