Select Your Language

Notifications

webdunia
webdunia
webdunia
webdunia

ರುಚಿಕರವಾದ ಎಗ್ ಬಿರಿಯಾನಿ

ರುಚಿಕರವಾದ ಎಗ್ ಬಿರಿಯಾನಿ
ಬೆಂಗಳೂರು , ಶನಿವಾರ, 25 ಡಿಸೆಂಬರ್ 2021 (11:41 IST)
ಮಾಂಸಾಹಾರ ಪ್ರಿಯರಿಗೆ ಸವಿಯಲು ಬಗೆ ಬಗೆಯ ರುಚಿಕರ ಖಾದ್ಯಗಳಿವೆ.

ನಾನ್‍ವೆಜ್ ಅಡುಗೆಯಲ್ಲಿ ಮೊಟ್ಟೆ ಬಿರಿಯಾನಿ ಸರಳವಾಗಿ ಮಾಡುವ ಅಡುಗೆಯಲ್ಲಿ ಒಂದಾಗಿದೆ.

ಈ ಅಡುಗೆಗೆ ಹೆಚ್ಚಿನ ಸಮಯ, ಪರಿಶ್ರಮವೂ ಅಗತ್ಯವಿಲ್ಲ. ನಾನ್ವೆಜ್ ಅಡುಗೆಯಲ್ಲಿ ಹೊಸ ಪ್ರಯತ್ನ ಮಾಡುವವರಿಗೂ ಇದು ಕಷ್ಟವೆನಿಸುವುದಿಲ್ಲ. ಈ ವಿಧಾನವನ್ನು ಅನುಸರಿಸಿ ಮನೆಯಲ್ಲೇ ಮೊಟ್ಟೆ ಬಿರಿಯಾನಿ ಮಾಡಿ, ಅದರ ರುಚಿ ಸವಿದು ಎಂಜಾಯ್ ಮಾಡಿ.

ಬೇಕಾಗುವ ಪದಾರ್ಥಗಳು
ಅಕ್ಕಿ- 2ಕಪ್
ಮೊಟ್ಟೆ- 5
ಚಕ್ಕೆ, ಲವಂಗ, ಏಲಕ್ಕಿ, ಪಲಾವ್ ಎಲೆ- ಸ್ವಲ್ಪ
ಶುಂಠಿ, ಬೆಳ್ಳುಳ್ಳಿ ಪೇಸ್ಟ್- 1 ಚಮಚ
ಹಸಿಮೆಣಸಿನ ಕಾಯಿ- 3
ಈರುಳ್ಳಿ- 2
ಟೊಮೆಟೋ- 2
ಕೊಬ್ಬಂಬರಿ ಸೊಪ್ಪು- ಸ್ವಲ್ಪ
ಮೊಸರು – ಅರ್ಧ ಕಪ್
ದನಿಯಾ ಪುಡಿ- 1 ಚಮಚ
ಖಾರದ ಪುಡಿ- 1 ಚಮಚ
ಬಿರಿಯಾನಿ ಮಸಾಲೆ ಪುಡಿ- 2 ಚಮಚ
ಅರಿಶಿಣದ ಪುಡಿ- ಅರ್ಧ ಚಮಚ
ರುಚಿಗೆ ತಕ್ಕಷ್ಟು ಉಪ್ಪು
ಅಡುಗೆ ಎಣ್ಣೆ- ಅಧ ಕಪ್
ತುಪ್ಪ- 2 ಚಮಚ

ಮಾಡುವ ವಿಧಾನ
*ಮೊದಲಿಗೆ ಒಲೆಯ ಮೇಲೆ ಕುಕ್ಕರ್ ಇಟ್ಟು ಅದಕ್ಕೆ ತುಪ್ಪ ಹಾಗೂ ಅಡುಗೆ ಎಣ್ಣೆಯನ್ನು ಹಾಕಿ ಬಿಸಿ ಮಾಡಿ ನಂತರ ಇದಕ್ಕೆ ಚಕ್ಕೆ, ಲವಂಗ, ಪಲಾವ್ ಎಲೆ, ಏಲಕ್ಕಿ, ಕಲ್ಲು ಹೂ ಹಾಕಿ ಫ್ರೈ ಮಾಡಿಕೊಳ್ಳಬೇಕು.

* ನಂತರ ಈರುಳ್ಳಿ ಹಾಗೂ ಹಸಿಮೆಣಸಿನ ಕಾಯಿ ಹಾಕಿ ಕೆಂಪಗೆ ಹುರಿದುಕೊಳ್ಳಿ. ಬಳಿಕ ಶುಂಠಿ, ಬೆಳ್ಳುಳ್ಳಿ ಪೇಸ್ಟ್, ಉಪ್ಪು, ಕೊತ್ತಂಬರಿ ಸೊಪ್ಪು ಹಾಗೂ ಟೊಮೆಟೋವನ್ನು ಹಾಕಿ ಕೆಂಪಗೆ ಹುರಿದುಕೊಳ್ಳಿ.
*ತದನಂತರ ಖಾರದ ಪುಡಿ, ಅರಿಶಿಣ, ದನಿಯಾ ಪುಡಿ ಹಾಗೂ ಬಿರಿಯಾನಿ ಮಸಾಲಾ ಪುಡಿ ಹಾಕಿ ಮಿಶ್ರಣ ಮಾಡಿಕೊಳ್ಳಬೇಕು.

* ಬಳಿಕ ಮೊಸಲು ಕುದಿಸಿ. ಅಳತೆಗೆ ತಕ್ಕಷ್ಟು ನೀರು ಹಾಗೂ ನೆನೆಸಿಟ್ಟುಕೊಂಡ ಅಕ್ಕಿಯನ್ನು ಹಾಕಿ ಕುಕ್ಕರ್ ಮುಚ್ಚಳ ಮುಚ್ಚಿ 2-3 ಕೂಗು ಕೂಗಿಸಿಕೊಂಡು, ಬೇಯಿಸಿದ ಮೊಟ್ಟೆಗಳನ್ನು ಮಿಶ್ರಣ ಮಾಡಿದರೆ, ರುಚಿಕರವಾದ ಎಗ್ ಬಿರಿಯಾನಿ ಸವಿಯಲು ಸಿದ್ಧ.


Share this Story:

Follow Webdunia kannada

ಮುಂದಿನ ಸುದ್ದಿ

ಲೈಂಗಿಕ ಆರೋಗ್ಯಕ್ಕೆ ಮದ್ದು ಈ ಅಣಬೆ!