Webdunia - Bharat's app for daily news and videos

Install App

ಸಿಂಪಲ್ ಸ್ವೀಟ್ ರೆಸಿಪಿ ಈ ಬೀಟ್‍ರೂಟ್ ಹಲ್ವಾ

Webdunia
ಶನಿವಾರ, 1 ಜುಲೈ 2017 (18:55 IST)
ಬೇಕಾಗುವ ಸಾಮಗ್ರಿಗಳು:
* ಬೀಟ್‍ರೂಟ್ - 2
* ಹಾಲು - 1 ಕಪ್
* ಸಕ್ಕರೆ - 1/2 ಕಪ್ 
* ಕೋವಾ -100 ಗ್ರಾಂ 
* ಏಲಕ್ಕಿ ಪುಡಿ - 1 ಚಮಚ
* ತುಪ್ಪ -3 ಟೇಬಲ್ ಚಮಚ
* ಗೋಡಂಬಿ -ಸ್ವಲ್ಪ(ಬೇಕಿದ್ದರೆ)
* ಒಣ ದ್ರಾಕ್ಷಿ - ಸ್ವಲ್ಪ
* ಕತ್ತರಿಸಿದ ಬಾದಾಮಿ ಚೂರು - ಸ್ವಲ್ಪ
 
ಮಾಡುವ ವಿಧಾನ :
* ಬೀಟ್‍ರೂಟನ್ನು ಚೆನ್ನಾಗಿ ತೊಳೆದು, ಸಿಪ್ಪೆತೆಗೆದು ತುರಿದಿಟ್ಟುಕೊಳ್ಳಿ.
 
* ತುಪ್ಪವನ್ನು ಆಳವಾದ ತಳವಿರುವ ಬಾಣಲೆಯಲ್ಲಿ ಹಾಕಿಕೊಂಡು ಕಾಯಿಸಿ. ಇದಕ್ಕೆ ಗೋಡಂಬಿ, ಬಾದಾಮಿ, ದ್ರಾಕ್ಷಿಗಳನ್ನು ಹಾಕಿ, ಕಡಿಮೆ ಉರಿಯಲ್ಲಿ ಸ್ವಲ್ಪ ಹೊತ್ತು ಹುರಿಯಿರಿ. ನಂತರ ಅವುಗಳನ್ನು ಬಾಣಲೆಯಿಂದ ತೆಗೆದು ಪಕ್ಕದಲ್ಲಿಡಿ.
 
* ಈಗ ಸಿಪ್ಪೆ ತೆಗೆದ ಬೀಟ್‍ರೂಟ್‍ಗಳನ್ನು ಬೆಚ್ಚಗಿನ ತುಪ್ಪದಲ್ಲಿ ಹಾಕಿ ಮತ್ತು ಸ್ವಲ್ಪ ಹೊತ್ತು ಕಡಿಮೆ ಹುರಿಯಲ್ಲಿ ಹುರಿಯಿರಿ. ಈಗ, ಇದಕ್ಕೆ ಹಾಲು ಮತ್ತು ಕೋವಾವನ್ನು ಹಾಕಿ. ಕಡಿಮೆ ಹುರಿಯಲ್ಲಿ ಕೈಯಾಡಿಸುತ್ತಿರಿ.
 
* ನಂತರ, ಇದಕ್ಕೆ ಸಕ್ಕರೆ, ಏಲಕ್ಕಿ ಪುಡಿಯನ್ನು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ಬಳಿಕ ಕಡಿಮೆ ಉರಿಯಲ್ಲಿ ಬೇಯಿಸಿ ಮತ್ತು ಆಗಾಗ ಚೆನ್ನಾಗಿ ಕೈಯಾಡಿಸುತ್ತಿರಿ. ಮಿಶ್ರಣವು ಗಟ್ಟಿಯಾಗುವವರೆಗೆ ಬೇಯಿಸುತ್ತ ಇರಿ.
 
* ಬಳಿಕ ಉರಿ ಆರಿಸಿ ಒಂದು ಪ್ಲೇಟ್ ಗೆ ಹಾಕಿ ಅದರ ಮೇಲೆ ಗೋಡಂಬಿ, ಬಾದಾಮಿ ಮತ್ತು ಒಣ ದ್ರಾಕ್ಷಿಗಳಿಂದ ಹಲ್ವಾವನ್ನು ಅಲಂಕರಿಸಿ, ಸವಿಯಿರಿ.
 

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments