ಸುವರ್ಣ ಗಡ್ಡೆ ಕಬಾಬ್

Webdunia
ಬುಧವಾರ, 26 ಸೆಪ್ಟಂಬರ್ 2018 (15:50 IST)
ಬೇಕಾಗುವ ಪದಾರ್ಥಗಳು:
 
ಸುವರ್ಣ ಗಡ್ಡೆ- 1 ಕಪ್
ನಿಂಬೆರಸ- 2 ಚಮಚ
ಮೈದಾ- 3 ಚಮಚ
ಕಡಲೆ ಹಿಟ್ಟು- 3 ಚಮಚ
ಮೆಣಸಿನ ಪುಡಿ- 2 ಚಮಚ
ಶುಂಠಿ, ಬೆಳ್ಳುಳ್ಳಿ ಪೇಸ್ಟ್- 1 ಚಮಚ
ಜೀರಿಗೆ ಪುಡಿ – ಅರ್ಧ ಚಮಚ
ಅರಿಶಿಣ ಪುಡಿ- ¼ ಚಮಚ
ಉಪ್ಪು- ರುಚಿಗೆ ತಕ್ಕಷ್ಟು, ಕರಿಯಲು ಬೇಕಾದಷ್ಟು ಎಣ್ಣೆ.
ತಯಾರಿಸುವ ವಿಧಾನ:
 
ನೀರಿನ ಅಂಶವಿಲ್ಲದ ಸುವರ್ಣಗಡ್ಡೆಯನ್ನು ಸಿಪ್ಪೆ ತೆಗೆದು ನಿಮಗೆ ಬೇಕಾದ ಆಕಾರಕ್ಕೆ ಕತ್ತರಿಸಿಕೊಳ್ಳಿ. ನಂತರ ಮೈದಾ ಹಿಟ್ಟು, ಕಡಲೆ ಹಿಟ್ಟು, ಮೆಣಸಿನ ಪುಡಿ, ನಿಂಬೆರಸ, ಶುಂಠಿ, ಬೆಳ್ಳುಳ್ಳಿ ಪೇಸ್ಟ್, ಜೀರಿಗೆ ಪುಡಿ, ಅರಿಶಿಣ ಪುಡಿ, ರುಚಿಗೆ ತಕ್ಕಷ್ಟು ಉಪ್ಪು, ಹಾಕಿ ಚೆನ್ನಾಗಿ ಕಲೆಸಿರಿ. ಕತ್ತರಿಸಿಟ್ಟಿಕೊಂಡಿದ್ದ ಸುವರ್ಣಗಡ್ಡೆಯನ್ನು ಅದಕ್ಕೆ ಸೇರಿಸಿ 10 ನಿಮಿಷ ಮುಚ್ಚಿಡಿ, ನಂತರ ಒಂದು ಬಾಣಲೆಯನ್ನು ತೆಗೆದುಕೊಂಡು ಅದಕ್ಕೆ ಎಣ್ಣೆಯನ್ನು ಹಾಕಿ ಚೆನ್ನಾಗಿ ಕುದಿಸಿ ನಂತರ ಕಲೆಸಿಕೊಂಡಿರುವ ಸುವರ್ಣ ಗಡ್ಡೆಯನ್ನು ಎಣ್ಣೆಯಲ್ಲಿ ಹಾಕಿ ಚೆನ್ನಾಗಿ ಪ್ರೈ ಮಾಡಿ. ನಿಮಗೆ ತಿನ್ನಲು ರುಚಿಯಾದ ಸುವರ್ಣ ಗಡ್ಡೆಯ ಕಬಾಬ್ ಸಿದ್ಧವಾಗಿರುತ್ತದೆ.
 
ಇದಕ್ಕೆ ಟೊಮೆಟೊ ಸಾಸ್ ಒಳ್ಳೆಯ ಕಾಂಬಿನೇಶನ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ದೀಪಾವಳಿಗೆ ಖೋವಾ ಬಳಸಿ ಗುಲಾಬ್ ಜಾಮೂನ್ ಮಾಡಿ

ಮುಂದಿನ ಸುದ್ದಿ
Show comments