ರುಚಿಯಾದ ಹೆಸರುಬೇಳೆ ವಡೆ

Webdunia
ಸೋಮವಾರ, 19 ಫೆಬ್ರವರಿ 2018 (12:56 IST)
ಬೆಂಗಳೂರು: ಸಾಕಷ್ಟು ಪೋಷಕಾಂಶಗಳನ್ನು ಹೊಂದಿರುವ ಹೆಸರುಬೇಳೆ ವಡೆ ಸಂಜೆಯ ವೇಳೆಗೆ ಒಂದೊಳ್ಳೆ ತಿನಿಸು. ಅದನ್ನು ಮಾಡುವ ವಿಧಾನ ಇಲ್ಲಿದೆ ನೋಡಿ.

ಬೇಕಾಗುವ ಸಾಮಗ್ರಿಗಳು:
ಹೆಸರುಬೇಳೆ 2 ಕಪ್‌, ಅಕ್ಕಿ ಹಿಟ್ಟು 1/2 ಕಪ್‌, ಬೇಯಿಸಿದ ಆಲೂಗಡ್ಡೆ 1/2 ಕಪ್‌, ಸಣ್ಣಗೆ ಕತ್ತರಿಸಿದ ಹಸಿಮೆಣಸಿನಕಾಯಿ 5-6, ಕತ್ತರಿಸಿದ ಕೊತ್ತಂಬರಿ ಸೊಪ್ಪು ಸ್ವಲ್ಪ, ತುರಿದ ಶುಂಠಿ ಸ್ವಲ್ಪ, ಜೀರಿಗೆ ಪುಡಿ 2 ಚಮಚ, ಅಡುಗೆ ಸೋಡಾ 1/4 ಚಮಚ, ಉಪ್ಪು: ರುಚಿಗೆ ತಕ್ಕಷ್ಟು, ಎಣ್ಣೆ ಕರಿಯಲು.


ಮಾಡುವ ವಿಧಾನ
ಹೆಸರುಬೇಳೆಯನ್ನು 2 ಗಂಟೆ ನೀರಿನಲ್ಲಿ ನೆನೆಸಿ, ಬಸಿದು ನೀರು ಹಾಕದೆ ತರಿತರಿಯಾಗಿ ಅರೆದಿಡಿ. ಅದಕ್ಕೆ ಅಕ್ಕಿ ಹಿಟ್ಟು, ಬೇಯಿಸಿ ಮಸೆದ ಆಲೂಗಡ್ಡೆ, ಹಸಿಮೆಣಸಿನಕಾಯಿ, ಕೊತ್ತಂಬರಿ ಸೊಪ್ಪು, ಶುಂಠಿ ತುರಿ, ಜೀರಿಗೆ ಪುಡಿ, ಸೋಡಾ, ಉಪ್ಪು ಸೇರಿಸಿ ನೀರಿನೊಂದಿಗೆ ವಡೆಯ ಹದಕ್ಕೆ ಕಲಸಿ ಇರಿಸಿ. ನಂತರ ಹಿಟ್ಟಿನಿಂದ, ಚಿಕ್ಕ ವಡೆಗಳನ್ನು  ತಟ್ಟಿ, ಎಣ್ಣೆಯಲ್ಲಿ ಕರಿಯಿರಿ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ದೀಪಾವಳಿಗೆ ಖೋವಾ ಬಳಸಿ ಗುಲಾಬ್ ಜಾಮೂನ್ ಮಾಡಿ

ಮುಂದಿನ ಸುದ್ದಿ
Show comments