ಕೃಷಿ ಕಾಯ್ದೆಗಳನ್ನು ಮತ್ತೆ ತರುವುದಿಲ್ಲ: ಕೇಂದ್ರ ಸ್ಪಷ್ಟನೆ

Webdunia
ಭಾನುವಾರ, 26 ಡಿಸೆಂಬರ್ 2021 (07:15 IST)
ಭೋಪಾಲ್ : ಈಗಾಗಲೇ ಹಿಂಪಡೆದಿರುವ ಕೃಷಿ ಕಾಯ್ದೆಗಳನ್ನು ಮತ್ತೆ ತರುವುದಿಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಸ್ಪಷ್ಟಪಡಿಸಿದ್ದಾರೆ.

ಕೆಲವು ರಾಜ್ಯಗಳಿಗೆ ವಿಧಾನಸಭಾ ಚುನಾವಣೆ ನಡೆಯಲಿದೆ. ಅದಾದ ಬಳಿಕ ತಿದ್ದುಪಡಿಯೊಂದಿಗೆ ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಮತ್ತೆ ಜಾರಿಗೊಳಿಸಲಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು.
ಈ ಮಾತನ್ನು ಅಲ್ಲಗಳೆದಿರುವ ಕೃಷಿ ಸಚಿವ ತೋಮರ್, ಯಾವುದೇ ಕಾರಣಕ್ಕೂ ಕೃಷಿ ಕಾಯ್ದೆಗಳನ್ನು ಮತ್ತೆ ತರುವುದಿಲ್ಲ ಎಂದು ತಿಳಿಸಿದ್ದಾರೆ. 

ನಾಗ್ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕೃಷಿ ಕಾನೂನುಗಳ ಬಗ್ಗೆ ಮಾತನಾಡುವಾಗ, ಕೇಂದ್ರ ಸರ್ಕಾರ ದೂರದೃಷ್ಟಿಯಿಂದ ಕೃಷಿ ಕಾನೂನುಗಳನ್ನು ಜಾರಿಗೊಳಿಸಿತ್ತು. ಕಾರಣಾಂತರಗಳಿಂದ ಅವುಗಳನ್ನು ಹಿಂಪಡೆದಿದೆ. ರೈತರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ಸದಾ ಕ್ರಿಯಾಶೀಲವಾಗಿರುತ್ತದೆ ಎಂದು ತೋಮರ್ ಅಭಿಪ್ರಾಯಪಟ್ಟಿದ್ದಾರೆ.

ಸದ್ಯದಲ್ಲೇ ಐದು ರಾಜ್ಯಗಳಿಗೆ ನಡೆಯುವ ವಿಧಾನಸಭಾ ಚುನಾವಣೆ ನಂತರ ಕೃಷಿ ಕಾಯ್ದೆಗಳನ್ನು ಜಾರಿಗೆ ತರಲು ಸರ್ಕಾರ ಚಿಂತಿಸಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಮಾತನಾಡಿದ್ದರು.

ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸತತ ಒಂದು ವರ್ಷದಿಂದ ರೈತರು ಪ್ರತಿಭಟನೆ ನಡೆಸಿದ್ದರು. ರೈತರ ಪ್ರಬಲ ವಿರೋಧವನ್ನು ಅರಿತು ಕೇಂದ್ರ ಸರ್ಕಾರ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆದಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಪಕ್ಷ ನಾಯಕರು ಮಾತನಾಡುವಾಗ ಅದನ್ನು ಕೇಳುವ ವ್ಯವಧಾನವೂ ಇಲ್ಲ: ಬಿವೈ ವಿಜಯೇಂದ್ರ

UNESCO ಪಟ್ಟಿಗೆ ಸೇರ್ಪಡೆಗೊಂಡ ದೀಪಾವಳಿ, ಸಂತಸ ಹಂಚಿಕೊಂಡ ಪ್ರಧಾನಿ ಮೋದಿ

ಉತ್ತರ ಕರ್ನಾಟಕದ ರೈತರಿಗೆ ಅನ್ಯಾಯ,ಶ್ವೇತಪತ್ರ ಬಿಡುಗಡೆ ಮಾಡಲಿ: ಆರ್‌.ಅಶೋಕ

ಮಮತಾ ಬ್ಯಾನರ್ಜಿ ತಲೆನೋವಾಗಲಿದೆ ಹುಮಾಯೂನ್ ಹೊಸ ನಡೆ

ಗೋವಾ ಪಬ್ ದುರಂತ: ಬೆಂಗಳೂರಿನ ಪಬ್‌ಗಳಲ್ಲಿ ಬಿಗಿಗೊಳಿಸಿದ ಸುರಕ್ಷತಾ ಕ್ರಮ

ಮುಂದಿನ ಸುದ್ದಿ
Show comments