ರೋಡ್ ಸೇಫ್ಟೀ ಕ್ರಿಕೆಟ್ ಟೂರ್ನಮೆಂಟ್: ಸೆಹ್ವಾಗ್ ಸಿಡಿಲಬ್ಬರದ ಬ್ಯಾಟಿಂಗ್

Webdunia
ಭಾನುವಾರ, 8 ಮಾರ್ಚ್ 2020 (09:28 IST)
ಮುಂಬೈ: ರೋಡ್ ಸೇಫ್ಟೀ ವರ್ಲ್ಡ್ ಸೀರೀಸ್ ಕ್ರಿಕೆಟ್ ಟೂರ್ನಮೆಂಟ್ ನಲ್ಲಿ ಸಚಿನ್ ತೆಂಡುಲ್ಕರ್ ಮತ್ತು ವೀರೇಂದ್ರ ಸೆಹ್ವಾಗ್ ಅವರ ಭರ್ಜರಿ ಬ್ಯಾಟಿಂಗ್ ನಿಂದ ಇಂಡಿಯನ್ ಲೆಜೆಂಡ್ಸ್ ಏಳು ವಿಕೆಟ್ ಗಳಿಂದ ಗೆದ್ದು ಬೀಗಿದೆ.


ವಾಂಖೆಡೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಬ್ರಿಯಾನ್ ಲಾರಾ ನೇತೃತ್ವದ ವೆಸ್ಟ್ ಇಂಡೀಸ್ ತಂಡದ ವಿರುದ್ಧ ಸಚಿನ್ ತೆಂಡುಲ್ಕರ್ ನೇತೃತ್ವದ ಇಂಡಿಯನ್ ಲೆಜೆಂಡ್ಸ್ ಭರ್ಜರಿ ಆಟವಾಡಿದೆ. ಹಳೆಯ ಹುಲಿಗಳ ಆಟ ನೋಡಿ ಪ್ರೇಕ್ಷಕರೂ ಖುಷಿಯಾಗಿದ್ದರು.

ಸಚಿನ್ ಮತ್ತು ಸೆಹ್ವಾಗ್ ಮೈದಾನಕ್ಕೆ ಬ್ಯಾಟ್ ಹಿಡಿದು ಬಂದಾಗ ಮೈದಾನದಲ್ಲಿದ್ದ ಪ್ರೇಕ್ಷಕರಿಂದ ಸಚಿನ್ ಸಚಿನ್ ಎಂಬ ಕೂಗು ಕೇಳಿಬಂತು. ಇದರ ಜತೆಗೆ ಸೆಹ್ವಾಗ್ ಮೊದಲ ಎಸೆತವನ್ನೇ ಬೌಂಡರಿಗಟ್ಟಿದಾಗ ಪ್ರೇಕ್ಷಕರ ಹರ್ಷೋದ್ಘಾರ ಮುಗಿಲು ಮುಟ್ಟಿತು.  ಸಚಿನ್ 29 ಎಸೆತಗಳಲ್ಲಿ 36 ರನ್ ಗಳಿಸಿದರೆ ಸೆಹ್ವಾಗ್ 57 ಎಸೆತಗಳಲ್ಲಿ 74 ರನ್ ಸಿಡಿಸಿ ಪಂದ್ಯ ಶ್ರೇಷ್ಠರಾದರು.

ಇದಕ್ಕೂ ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 150 ರನ್ ಗಳಿಸಿತು. ವಿಂಡೀಸ್ ಪರ ಶಿವನಾರಾಯಣ್ ಚಂದ್ರಪಾಲ್ 41 ಎಸೆತಗಳಲ್ಲಿ 61 ರನ್ ಸಿಡಿಸಿದರು. ಭಾರತದ ಪರ ವೇಗಿ ಜಹೀರ್ ಖಾನ್ ಮೊದಲ ವಿಕೆಟ್ ಬೇಟೆಯಾಡಿದರೆ ಇರ್ಫಾನ್ ಪಠಾಣ್ ಅಪಾಯಕಾರಿ ಬ್ರಿಯಾನ್ ಲಾರಾ ಬಲಿ ಪಡೆದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

IND vs SA: ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಮುಂದಿನ ಸುದ್ದಿ
Show comments