Select Your Language

Notifications

webdunia
webdunia
webdunia
webdunia

ಹಿರಿಯ ನಾಗರಿಕರ ಪಿಂಚಣಿ, ಅಂಗವಿಕಲರ ಮಾಸಾಶನ ಬಾಕಿ – ಖಂಡನೆ

ಹಿರಿಯ ನಾಗರಿಕರ ಪಿಂಚಣಿ, ಅಂಗವಿಕಲರ ಮಾಸಾಶನ ಬಾಕಿ – ಖಂಡನೆ
bangalore , ಶನಿವಾರ, 3 ಡಿಸೆಂಬರ್ 2022 (17:33 IST)
ಹಿರಿಯ ನಾಗರಿಕರಿಗೆ ಪಿಂಚಣಿ ಹಾಗೂ ಅಂಗವಿಕಲರಿಗೆ ಮಾಸಾಶಾನ ನೀಡಲೂ ಸಾಧ್ಯವಾಗದಷ್ಟು ರಾಜ್ಯ ಬಿಜೆಪಿ ಸರ್ಕಾರ ದಿವಾಳಿಯಾಗಿದ್ದು, ಸಿಎಂ ಬಸವರಾಜ ಬೊಮ್ಮಾಯಿಯವರು ತಾವು ಹೋದ ಕಡೆಯೆಲ್ಲ ಯೋಜನೆಗಳಿಗೆ ಕೇವಲ ಶಂಕುಸ್ಥಾಪನೆ ಮಾಡುತ್ತಾ ಜನರನ್ನು ವಂಚಿಸುತ್ತಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಕಾರ್ಯದರ್ಶಿ ಬಿ.ಟಿ.ನಾಗಣ್ಣ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ಟಿ.ನಾಗಣ್ಣ, “ರಾಜ್ಯ ಸರ್ಕಾರವು ಕಳೆದ ನಾಲ್ಕು ತಿಂಗಳಿನಿಂದ ಹಿರಿಯ ನಾಗರಿಕರಿಗೆ ಪಿಂಚಣಿ ನೀಡಿಲ್ಲ. ಅಂಗವಿಕಲರಿಗೆ ಮಾಸಾಶನವನ್ನೂ ಸರ್ಕಾರ ನೀಡುತ್ತಿಲ್ಲ. ಅಂಗವಿಕಲರಿಗೆ 2,000 ರೂಪಾಯಿ ಮಾಸಾಶನ ನೀಡುವ ಸರ್ಕಾರದ ಭರವಸೆಯು ಕೇವಲ ಘೋಷಣೆಯಾಗಿ ಉಳಿದಿದೆಯೇ ಹೊರತು ಜಾರಿಗೆ ಬರುತ್ತಿಲ್ಲ. ಬಿಜೆಪಿ ಶಾಸಕರು ಹಾಗೂ ಸಚಿವರ ಭ್ರಷ್ಟಾಚಾರದಿಂದಾಗಿ ಸರ್ಕಾರದ ಬೊಕ್ಕಸ ಬರಿದಾಗಿದೆ. ಆದ್ದರಿಂದಲೇ ಸಿಎಂ ಬಸವರಾಜ ಬೊಮ್ಮಾಯಿಯವರು ಯೋಜನೆಗಳನ್ನು ಜಾರಿಗೆ ತರುವ ಬದಲು ಕೇವಲ ಘೋಷಣೆ ಹಾಗೂ ಶಂಕುಸ್ಥಾಪನೆಯಲ್ಲೇ ಕಾಲ ಕಳೆಯುತ್ತಿದ್ದಾರೆ” ಎಂದು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಚಿರತೆ ಹಾವಳಿಯಿಂದ ಮೃತಪಟ್ಟವರಿಗೆ ತಲಾ 15 ಲಕ್ಷ ಪರಿಹಾರ ಘೋಷಿಸಿದ ಸಿಎಂ